ಹೊಸಕೋಟೆ: ರಾಜ್ಯದಲ್ಲಿ ಪರಿಶಿಷ್ಟರ ಕಾಲೋನಿಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಗ್ರ ಅಭಿವೃದ್ಧಿ ಮಾಡುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಹೊಸಕೋಟೆ: ರಾಜ್ಯದಲ್ಲಿ ಪರಿಶಿಷ್ಟರ ಕಾಲೋನಿಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಗ್ರ ಅಭಿವೃದ್ಧಿ ಮಾಡುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ತಾಲೂಕಿನ ಹಳೇವೂರು, ಗಂಗಾಪುರ, ದಳಸಗೆರೆ ಬನಹಳ್ಳಿ, ಗುಂಡ್ರಹಳ್ಳಿ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ಗ್ಯಾರಂಟಿ ಯೋಜನೆಗಳ ಸಮಗ್ರ ಅನುಷ್ಠಾನದ ಜೊತೆಗೆ ರಾಜ್ಯದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೂ ಹಂತಹಂತವಾಗಿ ಅನುದಾನ ಬಿಡುಗಡೆ ಮಾಡಿದೆ. ತಾಲೂಕನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾದರಿ ತಾಲೂಕನ್ನಾಗಿ ಮಾಡುವ ಸಂಕಲ್ಪ ತೊಟ್ಟಿದ್ದೇನೆ ಎಂದು ಹೇಳಿದರು.

ಮತದಾರರ ದಿಕ್ಕು ತಪ್ಪಿಸುವ ಕೆಲಸ:

ಹೊಸಕೋಟೆ ತಾಲೂಕಲ್ಲಿ ಸಹಕಾರ ಸಂಘಗಳ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದ್ದರಿಂದ ಫೆಬ್ರವರಿ 9ರಂದು ನಡೆಯಲಿರುವ ಹೊಸಕೋಟೆ ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಸೋಲುವ ಭೀತಿಯಿಂದ ಮತದಾರರ ದಿಕ್ಕು ತಪ್ಪಿಸಲು ನಾಮಪತ್ರ ಸಲ್ಲಿಸುವ ವೇಳೆ ಗೊಂದಲ ಸೃಷ್ಟಿಸಿದ್ದಾರೆ. ಆದರೆ ಟೌನ್ ಬ್ಯಾಂಕ್‌ನಲ್ಲೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಶಾಸಕ ಶರತ್‌ ಹೇಳಿದರು.

ಕೆಪಿಸಿಸಿ ಕಾರ್ಯದರ್ಶಿ ಇಟ್ಟಸಂದ್ರ ಬಿ.ಗೋಪಾಲ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ವಿ.ರಾಜಶೇಖರಗೌಡ, ನೆಲವಾಗಿಲು ಎಸ್‌ಎಫ್‌ಸಿಎಸ್ ನಿರ್ದೇಶಕ ಧರ್ಮೇಶ್, ತಾಪಂ ಮಾಜಿ ಅಧ್ಯಕ್ಷ ಕೆಂಚೇಗೌಡ, ಟಿಎಪಿಸಿಎಂಎಸ್ ಉಪಾಧ್ಯಕ್ಷ ಎನ್.ಹೊಸಳ್ಳಿ ರವಿ ಇತರರು ಹಾಜರಿದ್ದರು.

ಫೋಟೋ : 27 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕಿನ ಹಳೆವೂರು ಗ್ರಾಮದಲ್ಲಿ ಪರಿಶಿಷ್ಟರ ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಶರತ್‌ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು.