ಜಾನುವಾರುಗಳ ಸಂರಕ್ಷಣೆಗೆ ಸರ್ಕಾರ ಬದ್ಧ: ಶಾಸಕ ರಘುಮೂರ್ತಿ

| Published : Jan 25 2024, 02:05 AM IST

ಜಾನುವಾರುಗಳ ಸಂರಕ್ಷಣೆಗೆ ಸರ್ಕಾರ ಬದ್ಧ: ಶಾಸಕ ರಘುಮೂರ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರ ಬರಗಾಲ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಎಲ್ಲಾ ಅಗತ್ಯಕ್ರಮಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದೆ. ಸಾರ್ವಜನಿಕರಿಗೆ ಎಲ್ಲೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಎಚ್ಚರಿಕೆವಹಿಸಲಾಗಿದೆ.

ಚಳ್ಳಕೆರೆ: ರಾಜ್ಯ ಸರ್ಕಾರ ಬರಗಾಲ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಎಲ್ಲಾ ಅಗತ್ಯಕ್ರಮಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದೆ. ಸಾರ್ವಜನಿಕರಿಗೆ ಎಲ್ಲೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಎಚ್ಚರಿಕೆವಹಿಸಲಾಗಿದೆ. ಅಲ್ಲದೇ ಜಾನುವಾರುಗಳ ರಕ್ಷಣೆಗೂ ಸಹ ಗೋಶಾಲೆ ಆರಂಭಿಸುವ ಮೂಲಕ ರೈತರ ಬದುಕಿಗೆ ನೆಮ್ಮದಿ ತಂದಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಬುಧವಾರ ಪರಶುರಾಮಪುರ ಹೋಬಳಿ ಚೌಳೂರು ಗ್ರಾಮದಲ್ಲಿ ಗೋಶಾಲೆ ಉದ್ಘಾಟಿಸಿ, ಜಾನುವಾರುಗಳಿಗೆ ಮೇವು ವಿತರಿಸಿ ಮಾತನಾಡಿದರು. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಪರಶುರಾಮಪುರ ಹೋಬಳಿ ವ್ಯಾಪ್ತಿಯ ಜಾನುವಾರುಗಳಿಗೆ ಅವಕಾಶ ಕಲ್ಪಿಸಲಾಗಿದೆ. ಹೋಬಳಿಗೊಂದು ಗೋಶಾಲೆ ತೆರೆಯುವಂತೆ ಸೂಚನೆ ನೀಡಲಾಗಿದೆ. ಪ್ರಸ್ತುತ ವರ್ಷದಲ್ಲಿ ಇದು ಮೊದಲ ಗೋಶಾಲೆಯಾಗಿದೆ. ಜಾನುವಾರುಗಳಿಗೆ ಸಮಯಕ್ಕೆ ಮೇವು, ನೀರು ವಿತರಿಸಿ ಅವುಗಳ ಆರೋಗ್ಯ ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ತಹಸೀಲ್ದಾರ್ ರೇಹಾನ್‌ ಪಾಷ, ಪಶುವೈದ್ಯಾಧಿಕಾರಿ ಡಾ.ರೇವಣ್ಣ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಹಿರಿಯ ಮುಖಂಡ ಚನ್ನಕೇಶವ, ಕೆಡಿಪಿ ನಾಮಿನಿ ಸದಸ್ಯ ರಂಗಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗಲೂರಸ್ವಾಮಿ, ರುದ್ರೇಶ್, ನಾಗಭೂಷಣ್, ಕರಿಯಣ್ಣ, ಕೃಷ್ಣಪ್ಪ, ತಿಪ್ಪೇಸ್ವಾಮಿ, ಜಯವೀರಚಾರಿ, ಬಸವರಾಜು, ಗುಜ್ಜಾರಪ್ಪ, ಹನುಮಂತಪ್ಪ ಮುಂತಾದವರು ಭಾಗವಹಿಸಿದ್ದರು.