ಸಾರಾಂಶ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯ ಆವರಣದಲ್ಲಿ ತಾಲ್ಲೂಕಾಡಳಿತದಿಂದ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಾಗೂ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು
ಸಿಂಧನೂರು: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ಪ್ರದೇಶವಾಗಿರುವ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ನಗರದ ಮಿನಿವಿಧಾನಸೌಧ ಕಚೇರಿಯ ಆವರಣದಲ್ಲಿ ಮಂಗಳವಾರ ತಾಲೂಕಾಡಳಿತದಿಂದ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಾಗೂ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಬಾಯ್ ಪಟೇಲ್ರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ 371(ಜೆ) ಕಲಂ ಜಾರಿಗೊಳಿಸಿ ಈ ಭಾಗಕ್ಕೆ ಶಿಕ್ಷಣ, ಉದ್ಯೋಗ ಹಾಗೂ ಅಭಿವೃದ್ಧಿಯಲ್ಲಿ ವಿಶೇಷ ಮೀಸಲಾತಿ ಕಲ್ಪಿಸಿದ ಫಲವಾಗಿ ಸಾವಿರಾರು ವಿದ್ಯಾರ್ಥಿಗಳು ಬದುಕು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಅರುಣ್ ಎಚ್.ದೇಸಾಯಿ ಮಾತನಾಡಿದರು. ಅದೇ ರೀತಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಮಾತನಾಡಿದರು. ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ದುರುಗಪ್ಪ ಡೊಳ್ಳಿನ್, ನಗರಸಭೆ ಸದಸ್ಯರಾದ ಶೇಖರಪ್ಪ ಗಿಣಿವಾರ, ಹೆಚ್.ಬಾಷಾ, ಆಲಂಸಾಬ, ಇಂದಿರಾಗಾಂದಿ ಸ್ವಸಹಾಯ ಸಂಘಗಳ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು. ಶಿಕ್ಷಕ ವೀರೇಶ ಗೋನವಾರ ನಿರೂಪಿಸಿದರು.