ಸರ್ಕಾರಿ ನೌಕರರು ಕ್ರೀಡಾ ಚಟುವಟಿಕೆಯಿಂದ ಕ್ರಿಯಾಶೀಲರಾಗಲು ಸಾಧ್ಯ: ಡಿಸಿ ವಿದ್ಯಾಕುಮಾರಿ

| Published : Feb 24 2024, 02:30 AM IST

ಸರ್ಕಾರಿ ನೌಕರರು ಕ್ರೀಡಾ ಚಟುವಟಿಕೆಯಿಂದ ಕ್ರಿಯಾಶೀಲರಾಗಲು ಸಾಧ್ಯ: ಡಿಸಿ ವಿದ್ಯಾಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಸ್ಪರ್ಧೆಗಳ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿ ಲವಲವಿಕೆ, ಕ್ರಿಯಾಶೀಲತೆಯಿಂದ ತಮ್ಮ ಕಾರ್ಯಗಳಲ್ಲಿ ತೊಡಗಲು ಸಾಧ್ಯ. ಆದ್ದರಿಂದ ಸರ್ಕಾರಿ ನೌಕರರು ಪ್ರತಿದಿನ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.ಅವರು ಶುಕ್ರವಾರ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸರ್ಕಾರಿ ನೌಕರರು ನಿತ್ಯ ಒತ್ತಡದ ನಡುವೆ ಕೆಲಸ ಮಾಡುವುದು ಅನಿವಾರ್ಯವಾಗಿದ್ದು, ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹ ಸನ್ನದ್ಧರಾಗುವುದರ ಜೊತೆಗೆ ಮನೋಲ್ಲಾಸವು ಸಿಗುತ್ತದೆ. ತಮ್ಮ ಮಕ್ಕಳ ವಿದ್ಯಾಭ್ಯಾಸದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು. ಈ ವೃತ್ತಿ ಜೀವನದ ಜೊತೆಗೆ ತಮ್ಮ ಕುಟುಂಬದ ಹೆಚ್ಚಿನ ಸಮಯ ಕಳೆಯಬೇಕು ಎಂದವರು ಸಲಹೆ ಮಾಡಿದರು.

ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯ ಹಾಗೂ ಕ್ರೀಡೆಯ ಪ್ರತಿಜ್ಞಾ ವಿಧಿಗಳನ್ನು ಬೋಧಿಸಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಸಂಘದ ಜಿಲ್ಲಾ ಖಜಾಂಚಿ ಶರೀಫ್ ರೋಣ, ಜಿಲ್ಲಾ ಪರಿಷತ್ ಸದಸ್ಯ ಯುವ ಜತ್ತನ್, ಕಾರ್ಯಾಧ್ಯಕ್ಷ ದಯಾನಂದ್, ಗೌರವಾಧ್ಯಕ್ಷ ಕೆ.ಆರ್. ನಾಗೇಶ್ ಆಚಾರ್, ಉಪಾಧ್ಯಕ್ಷ ದೇವರಾಜ್, ಸುಭಾಷ್ ಹೆಗ್ಡೆ, ಹೆಬ್ರಿ ತಾಲೂಕು ಅಧ್ಯಕ್ಷ ಹರೀಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕ.ರಾ.ಸ.ನೌ ಸಂಘ ಜಿಲ್ಲಾಧ್ಯಕ್ಷ ಕೆ.ದಿನಕರ ಶೆಟ್ಟಿ ಅಂಪಾರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪ್ರಕಾಶ್ ಶೆಟ್ಟಿ ಹಾವಂಜೆ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ಕೃಷ್ಣಯ್ಯ ವಂದಿಸಿದರು.