ಸಾರಾಂಶ
ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯ ಜಾರಿಗೊಳಿಸಬೇಕು ಮತ್ತು ರಾಜ್ಯ ಸರ್ಕಾರಿ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸೆಯ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕು ಎಂದು ಶಾಸಕರು ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ವಿನಂತಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯ ಜಾರಿಗೊಳಿಸಬೇಕು ಮತ್ತು ರಾಜ್ಯ ಸರ್ಕಾರಿ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸೆಯ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕು ಎಂದು ಶಾಸಕರು ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ವಿನಂತಿಸಲಾಯಿತು.
ಮನವಿ ಸ್ವೀಕರಿಸಿದ ಶಾಸಕರು, ವಿಧಾನಸಭಾ ಅಧಿವೇಶನದ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಕಾರ್ಯದರ್ಶಿ ಕೃಷ್ಣಯ್ಯ, ರಾಜ್ಯ ಪರಿಷತ್ ಸದಸ್ಯ ಆನಂದ ಜತ್ತನ್, ಕಾರ್ಯಾಧ್ಯಕ್ಷ ದಯಾನಂದ ಬೆಣ್ಣೂರು, ಗೌರವ ಅಧ್ಯಕ್ಷ ನಾಗೇಶ ಆಚಾರ್ಯ, ತಾಲ್ಲೂಕು ಅಧ್ಯಕ್ಷರಾದ ಬಾಲಕೃಷ್ಣ ಎನ್., ಹರೀಶ್ ಪೂಜಾರಿ, ರವಿ ಎಸ್. ಪೂಜಾರಿ, ಇತರ ಪ್ರಮುಖರಾದ ಪ್ರಶಾಂತ್ ಶೆಟ್ಟಿ ಹಾವಂಜೆ, ಗಣೇಶ್ ಕುಮಾರ್ ಶೆಟ್ಟಿ, ಎಸ್.ಎಸ್. ಪ್ರಸಾದ್, ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಮನೋಹರ ಹೆಗ್ಡೆ, ವಿಜಯ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ರಾಘವೇಂದ್ರ ನಾಯಕ್, ಯಮುನಾ, ಶ್ರೀಧರ್ ಪ್ರಭು, ದೇವದಾಸ್ ಕಾಮತ್, ಸತೀಶ್ ರಾವ್, ನಾಗೇಶ್, ಧರ್ಮೇಂದ್ರ ಮತ್ತಿತರರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))