ಸಾರಾಂಶ
ಕನ್ನಡಪ್ರಭ ವಾರ್ತೆ ಶಿರಾ
ಮಹಾತ್ಮ ಗಾಂಧೀಜಿಯವರ ಕನಸಿನಂತೆ ರಾಮರಾಜ್ಯ ಮಾಡುವ ಕನಸನ್ನು ನನಸು ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಸಂವಿಧಾನದ ಆಶಯದಂತೆ ಸಮ ಸಮಾಜ ಕಟ್ಟಲು ಸರ್ಕಾರದ ಸೌಲಭ್ಯದಗಳು ಪ್ರತಿ ಮನೆಮನೆಗೂ ತಲುಪಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.ಅವರು ಶುಕ್ರವಾರ ತಾಲೂಕಿನ ಹಾಲೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಸ್ಥಳೀಯ ಜನರಿಗೆ ತಲುಪಲು ಇಲ್ಲಿನ ಸ್ಥಳೀಯ ಆಡಳಿತದ ಮೂಲಕ ತಲುಪಲು ಸಹಕಾರಿಯಾಗುತ್ತದೆ. ಅದಕ್ಕೊಂದು ಉತ್ತಮ ಕಟ್ಟಡ ಅವಶ್ಯಕ. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಸಮರ್ಪಕ ರೀತಿಯಲ್ಲಿ ನಡೆಯಬೇಕು. ಪ್ರತಿಯೊಬ್ಬರಿಗೂ ಉದ್ಯೋಗ ಸಿಗಬೇಕು ಎಂದರು.
ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಸೌಲಭ್ಯಗಳು ಯಾವುದೇ ಮಧ್ಯವರ್ತಿಗಳ ಸಂಪರ್ಕ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ಕೇಂದ್ರ ಸರ್ಕಾರವು ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಸಿಗಬೇಕೆಂದು ಮನೆ ಮನೆ ಗಂಗೆ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಆದರೆ ಅಧಿಕಾರಿಗಳು ಯೋಜನೆಯ ಅನುಷ್ಠಾನದಲ್ಲಿ ಲೋಪಗಳಾಗಿದ್ದು ಅದನ್ನು ಸರಿಪಡಿಸಬೇಕು ಎಂದರು.ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಮಾತನಾಡಿ, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದರೆ ಅಭಿವೃದ್ಧಿ ಸಾಧ್ಯವಾಗುತ್ತದೆ. ಗ್ರಾಮ ಪಂಚಾಯಿತಿಯ ಕೆಂದ್ರ ಭಾಗದಲ್ಲಿ ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದಬೇಕು. ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಆಗ ದೇಶದ ಅಭಿವೃದ್ಧಿ ಸ್ವಾವಲಂಬಿ ಯುವ ಪೀಳಿಗೆ ಬರುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾರೋಗೆರೆ ಮಹೇಶ್, ಹಾಲೇನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಿ.ಯು. ಕುಮಾರಸ್ವಾಮಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆರ್.ಹರೀಶ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಂಗಮ್ಮ, ಕೆಎಂಎಫ್ ಮಾಜಿ ನಿರ್ದೇಶಕ ಬಾಲನಹಳ್ಳಿ ಪ್ರಕಾಶ್, ಎಇ ಇ ಮಂಜು ಪ್ರಸಾದ್, ಎಂ.ಎನ್.ರಾಜಣ್ಣ, ಗ್ರಾಮ ಪಂಚಾಯಿತಿ ಸದಸ್ಯರಾದ ಅಬೀದಾ, ಎಚ್.ಆರ್. ಭಾಗ್ಯ, ಎಚ್.ಎನ್. ಶಿವಶಂಕರಪ್ಪ, ಶಾಂತಕುಮಾರಿ, ಗಂಗಮ್ಮ, ಬಿ .ಆರ್ .ಲೋಕೇಶ್, ಶಿವಮ್ಮ, ರಘುನಾಥ್, ನಟರಾಜು, ಗೌರಮ್ಮ, ಭೂತೇಶ್, ಪ್ರೇಮಕುಮಾರಿ, ಪಿಡಿಒ ಕೆ.ಗಂಗಾಧರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ನಾಗರಾಜು, ಪಿಡಿಓ ಎನ್. ಮಂಜುನಾಥ್, ಕಾರ್ಯದರ್ಶಿ ಎಸ್. ದಿನೇಶ್, ಹನುಮಂತರಾಯಪ್ಪ, ಸಿದ್ದಪ್ಪ ಸೇರಿದಂತೆ ಹಲವಾರು ಮುಖಂಡರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಹಾಜರಿದ್ದರು.೨೪ಶಿರಾ೧: ಶಿರಾ ತಾಲೂಕಿನ ಹಾಲೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಸಂಸದ ಗೋವಿಂದ ಕಾರಜೋಳ, ಶಾಸಕ ಟಿ.ಬಿ.ಜಯಚಂದ್ರ, ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ನೆರವೇರಿಸಿದರು.
;Resize=(128,128))