ಪ್ರಾಂಶುಪಾಲ ಪರಮಶಿವಪ್ಪ ಅವರು ಮಾಧ್ಯಮದೊಂದಿಗೆ ಮಾತನಾಡಿ, ವಿದ್ಯಾರ್ಥಿಗಳಿಗೆ ಸೂಕ್ತ ವಾತಾವರಣ ಒದಗಿಸಿದಾಗ ಮಾತ್ರ ಅವರಲ್ಲಿರುವ ಪ್ರತಿಭೆ ಅರಳಲು ಸಾಧ್ಯ. ನಮ್ಮ ಕಾಲೇಜಿನಲ್ಲಿ ಉತ್ತಮ ಬೋಧಕ ವೃಂದವಿದ್ದು, ಸಮಾಜಕ್ಕೆ ಪ್ರತಿಭಾವಂತರನ್ನು ನೀಡುವಲ್ಲಿ ನಾವು ವಿಶೇಷ ಕಾಳಜಿ ವಹಿಸಿದ್ದೇವೆ. ಪೋಷಕರು ಮತ್ತು ಸಮುದಾಯದ ನಿರೀಕ್ಷೆಯಂತೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಮುಖ್ಯ ಉದ್ದೇಶ. ರಾಜ್ಯಮಟ್ಟದಲ್ಲಿ ಸ್ಪರ್ಧೆಗಿಳಿಯುತ್ತಿರುವ ನಮ್ಮ ವಿದ್ಯಾರ್ಥಿನಿಯ ಸಾಧನೆ ಕಾಲೇಜಿಗೆ ಹೆಮ್ಮೆ ತರಿಸಿದೆ ಎಂದು ಹೇಳಿದರು.

ಅರಸೀಕೆರೆ: ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎಸ್. ಶಾಲಿನಿ, ಸಾಂಸ್ಕೃತಿಕ ಸ್ಪರ್ಧೆಯ ಅಂಗವಾಗಿ ವಿಜ್ಞಾನ ಮಾದರಿಯನ್ನು ಪ್ರಸ್ತುತಪಡಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.ಈ ಸಾಧನೆಗೆ ಮಾರ್ಗದರ್ಶಕರಾಗಿದ್ದ ಗಣಿತ ಉಪನ್ಯಾಸಕ ಹಾಗೂ ಎನ್‌ಎಸ್‌ಎಸ್ ಅಧಿಕಾರಿ ಡಿ.ಬಿ. ಮೋಹನ್ ಕುಮಾರ್ ಜೊತೆಗೆ ವಿದ್ಯಾರ್ಥಿ ಅಶ್ವಿನಿ ಅವರಿಗೆ, ಕಾಲೇಜಿನ ಪ್ರಾಂಶುಪಾಲ ಪರಮಶಿವಪ್ಪ ಹಾಗೂ ಬೋಧಕ ವೃಂದ ಅಭಿನಂದನೆ ಸಲ್ಲಿಸಿದರು.ಪ್ರಾಂಶುಪಾಲ ಪರಮಶಿವಪ್ಪ ಅವರು ಮಾಧ್ಯಮದೊಂದಿಗೆ ಮಾತನಾಡಿ, ವಿದ್ಯಾರ್ಥಿಗಳಿಗೆ ಸೂಕ್ತ ವಾತಾವರಣ ಒದಗಿಸಿದಾಗ ಮಾತ್ರ ಅವರಲ್ಲಿರುವ ಪ್ರತಿಭೆ ಅರಳಲು ಸಾಧ್ಯ. ನಮ್ಮ ಕಾಲೇಜಿನಲ್ಲಿ ಉತ್ತಮ ಬೋಧಕ ವೃಂದವಿದ್ದು, ಸಮಾಜಕ್ಕೆ ಪ್ರತಿಭಾವಂತರನ್ನು ನೀಡುವಲ್ಲಿ ನಾವು ವಿಶೇಷ ಕಾಳಜಿ ವಹಿಸಿದ್ದೇವೆ. ಪೋಷಕರು ಮತ್ತು ಸಮುದಾಯದ ನಿರೀಕ್ಷೆಯಂತೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಮುಖ್ಯ ಉದ್ದೇಶ. ರಾಜ್ಯಮಟ್ಟದಲ್ಲಿ ಸ್ಪರ್ಧೆಗಿಳಿಯುತ್ತಿರುವ ನಮ್ಮ ವಿದ್ಯಾರ್ಥಿನಿಯ ಸಾಧನೆ ಕಾಲೇಜಿಗೆ ಹೆಮ್ಮೆ ತರಿಸಿದೆ ಎಂದು ಹೇಳಿದರು.