ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದೆ, ಆದರೇ ನಾರಾಯಣ ಗುರು ನಿಗಮಕ್ಕೆ ಅನುದಾನ ನೀಡದೇ ಬಿಲ್ಲವ ಸಮುದಾಯವನ್ನು ವಂಚಿಸುತ್ತಿದೆ. ಹಾಗಾಗಿ ಹಿಂದುಳಿದ ವರ್ಗಗಳ ಸಮುದಾಯದ ಅದರಲ್ಲೂ ಕರಾವಳಿ ಮತ್ತು ಮಲೆನಾಡಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಿಲ್ಲವರು, ಈಡಿಗರು, ನಾಮಧಾರಿಗಳು ಕಾಂಗ್ರೆಸ್ ಪಕ್ಷದ ಭರವಸೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ ಹೇಳಿದ್ದಾರೆ.
ಕೋಟ: ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದೆ, ಆದರೇ ನಾರಾಯಣ ಗುರು ನಿಗಮಕ್ಕೆ ಅನುದಾನ ನೀಡದೇ ಬಿಲ್ಲವ ಸಮುದಾಯವನ್ನು ವಂಚಿಸುತ್ತಿದೆ. ಹಾಗಾಗಿ ಹಿಂದುಳಿದ ವರ್ಗಗಳ ಸಮುದಾಯದ ಅದರಲ್ಲೂ ಕರಾವಳಿ ಮತ್ತು ಮಲೆನಾಡಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಿಲ್ಲವರು, ಈಡಿಗರು, ನಾಮಧಾರಿಗಳು ಕಾಂಗ್ರೆಸ್ ಪಕ್ಷದ ಭರವಸೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆ ಪತ್ರದಲ್ಲಿ ನಾರಾಯಣ ಗುರು ನಿಗಮಕ್ಕೆ ವಾರ್ಷಿಕ 500 ಕೋಟಿ ರು. ಕೊಡುವುದಾಗಿ ಘೋಷಿಸಿತ್ತು. ಅಲ್ಲದೇ, ಪ್ರತಿವರ್ಷ ಬಜೆಟ್ ನಲ್ಲಿ 500 ಕೋಟಿ ರು.ನಂತೆ 5 ವರ್ಷದಲ್ಲಿ 2500 ಕೋಟಿ ರು. ನೀಡುವುದಾಗಿ ಪ್ರಕಟಿಸಿತ್ತು. ಆದರೆ, ಇಲ್ಲಿಯವರೆಗೆ ಭರವಸೆ ನೀಡಿದಂತೆ ಹಣ ನೀಡದೆ ಇರುವುದರಿಂದ ನಾರಾಯಣಗುರು ನಿಗಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೊಸದಾಗಿ ಅಧಿಕಾರ ಸ್ವೀಕರಿಸಿದ ಸಿಎಂ ಡಿಕೆಶಿ ಈ ಬಗ್ಗೆ ಗಮನ ಹರಿಸಿ ನಾರಾಯಣಗುರು ನಿಗಮಕ್ಕೆ ಭರವಸೆ ನೀಡಿದಂತೆ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿರುವ ಐರೋಡಿ ವಿಠಲ ಪೂಜಾರಿ, ಕೊಟ್ಟ ಭರವಸೆಯನ್ನು ಕಾಂಗ್ರೆಸ್ ಸರಕಾರ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಬಿಲ್ಲವರು, ಈಡಿಗರು, ನಾಮಧಾರಿಗಳು ಒಟ್ಟಾಗಿ ನಿಗಮಕ್ಕೆ ಹಣ ಬಿಡುಗಡೆ ಮಾಡಲು ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.