ಸಾರಾಂಶ
ಡಂಬಳ: ಗುಣಮಟ್ಟದ ಶಿಕ್ಷಣ ಸಮಾಜದ ಬಡವರಿಗೂ ದೊರೆಯಬೇಕು ಎನ್ನುವ ಉದ್ದೇಶದಿಂದ ರಾಜ್ಯಾದ್ಯಂತ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಯಿತು. ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಸುಸಜ್ಜಿತ ಕಟ್ಟಡದ ಜತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆ ಈ ಭಾಗದ ಮಕ್ಕಳಿಗೆ ಶಿಕ್ಷಣ ಕಲಿಯಲು ತುಂಬಾ ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಡಂಬಳ ಹೋಬಳಿಯ ಡೋಣಿ ಗ್ರಾಮದಲ್ಲಿ ಲೋಕೋಪಯೋಗಿ, ಸಮಾಜ ಕಲ್ಯಾಣ ಇಲಾಖೆಯ ಲೆಕ್ಕ ಶೀರ್ಷಿಕಿ 4059 ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ₹18 ಕೋಟಿ ರು. ವೆಚ್ಚದಲ್ಲಿ ನಿರ್ಮಣವಾಗಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು.ಸುಜ್ಜಿತ ಕಟ್ಟಡ ನಿರ್ಮಾಣವಾಗಿದ್ದು, ಸುತ್ತಮುತ್ತಲೀನ ಗ್ರಾಮಗಳ ಸಾರ್ವಜನಿಕರು ವಸತಿ ನಿಲಯದಲ್ಲಿ ಬರುವ ಸಣ್ಣ ಪುಟ್ಟ ಸಮಸ್ಯೆಗಳಿಗೆ ಬಗೆಹರಿಸಲು ಮುಂದಾಗಬೇಕು. ವಸತಿ ನಿಲಯದ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಸಲಹೆ ನೀಡಿದರು.
ನಮ್ಮ ಸರ್ಕಾರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೂ ಆದ್ಯತೆ ನೀಡಿದ್ದು, ಬಡವರ ಮಕ್ಕಳ ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶ ಸರ್ಕಾರದ್ದಾಗಿದೆ. ಪಾಲಕರು ಸಹ ಜಾಗೃತೆ ಹೊಂದುವ ಮೂಲಕ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ವಸತಿ ಶಾಲೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ವಸತಿ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಕಟ್ಟಡವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿಕೊಂಡು ಹೋಗಬೇಕು ಮತ್ತು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಸಲಹೆ ನೀಡಿದರು.ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಬಡವರ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿವೆ. ಮಕ್ಕಳು ಶಿಸ್ತು ಬದ್ಧ ಜೀವನ ಶಿಕ್ಷಣದೊಂದಿಗೆ ಸಂಸ್ಕಾರವು ಮುಖ್ಯ. ವಿದ್ಯಾರ್ಥಿಗಳು ನಾವು ಬಡವರು ಎನ್ನುವ ಕೀಳರಿಮೆಯನ್ನು ಹೊಂದಬಾರದು. ವಿದ್ಯಾರ್ಥಿಗಳು ಸಮಯ ಹಾಗೂ ಕರ್ತವ್ಯಕ್ಕೆ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು.
ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ವಿ.ಎನ್. ಪಾಟೀಲ ಮಾತನಾಡಿ, ಗುರುಕುಲ ಪದ್ಧತಿಯಲ್ಲಿ ಶಿಕ್ಷಣ ನೀಡಲಾಗುತ್ತಿತ್ತು. ಅದೆ ಮಾದರಿಯಲ್ಲಿ ಇಂದು ಸರಕಾರ ಸುಸಜ್ಜಿತವಾದ ಮಾದರಿಯ ಕಟ್ಟಡದ ಮೂಲಕ ಶಿಕ್ಷಣ ನೀಡುತ್ತಿದೆ. ಇದರ ಸದುಪಯೋಗ ಪಡೆದು ಪ್ರತಿ ವಿದ್ಯಾರ್ಥಿ ಉತ್ತಮ ಭವಿಷ್ಯ ನಿಮ್ಮದಾಗಿಸಿಕೊಳ್ಳಿ ಎಂದು ಹೇಳಿದರು.ಶಾಲೆಗಾಗಿ ಜಮೀನು ನೀಡಿದ ಜಗದೀಶ್ವರಪ್ಪ ಬಸಪ್ಪ ಮೈನಳ್ಳಿ, ಲಕ್ಷ್ಮಪ್ಪ ಹನಮಪ್ಪ ಹೂಗಾರ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಡೋಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲಿಗೆವ್ವ ಅಳವಂಡಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಡಿ.ಡಿ. ಮೋರನಾಳ, ತಹಸೀಲ್ದಾರ್ ಎರ್ರಿಸ್ವಾಮಿ ವಿ.ಎಸ್., ಇಓ ವಿಶ್ವನಾಥ ಹೊಸಮನಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬಸವರಾಜ ಎಚ್., ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ, ಸಹಾಯಕ ಎಂಜಿನಿಯರ್ ನಾಗೇಂದ್ರ ಪಟ್ಟಣಶೆಟ್ಟರ, ಪ್ರಥಮ ದರ್ಜೆ ಗುತ್ತಿಗೆದಾರರಾದ ಕೆ. ಬಸುರಾಜ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅರುಣಾ ಸೋರಗಾಂವಿ, ಎಂಜಿನಿಯರ್ ನಿಂಗನಗೌಡರ, ಪ್ರಾಂಶುಪಾಲರು ಶಶಿಕಲಾ ಸೂಳಿಭಾವಿ, ಮುಂಡರಗಿ ವೃತ್ತ ನೀರಿಕ್ಷಕ ಮಂಜುನಾಥ ಕುಸಗಲ್, ಸೇರಿದಂತೆ ಸುತ್ತಮುತ್ತಲೀನ ಗ್ರಾಮಸ್ಥರು, ಪಾಲಕರು, ಶಿಕ್ಷಕರು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.