ಸಾರಾಂಶ
ಕನ್ನಡಪ್ರಭ ವಾರ್ತೆ ಪುತ್ತೂರು
ಪುತ್ತೂರಿಗೆ ಮಂಜೂರಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಗುರುವಾರ ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿದ್ದಾರೆ.ಪುತ್ತೂರಿಗೆ ಈ ಬಾರಿಯ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ಮಂಜೂರುಗೊಂಡಿತ್ತು. ಇದಾದ ಬಳಿಕ ಬನ್ನೂರಿನಲ್ಲಿ ಕಾಯ್ದಿರಿಸಿದ ೪೦ ಎಕ್ರೆ ಜಾಗಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಉನ್ನತ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಬುಧವಾರ ಶಾಸಕರು ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
300 ಕೋಟಿ ರು. ಅನುದಾನ ಮನವಿ:ಸಚಿವರಲ್ಲಿ ಮಾತುಕತೆ ನಡೆಸಿದ ಶಾಸಕರು ಮೆಡಿಕಲ್ ಕಾಲೇಜು ನಿರ್ಮಾಣ ವಿಚಾರಕ್ಕೆ ಸಂಬಂದಿಸಿದಂತೆ ಪ್ರಾರಂಭಿಕ ರು.೩೦೦ ಕೋಟಿ ಅನುದಾನ ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಪ್ರಾರಂಭಿಕವಾಗಿ ೪೦೦ ಬೆಡ್‌ನ ಆಸ್ಪತ್ರೆಯ ನಿರ್ಮಾಣವಾಗಬೇಕಿದೆ ಎಂದರು...............ಪುತ್ತೂರಿನ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮತ್ತು ಅದಕ್ಕೆ ಪೂರಕವಾಗಿ ಕೆಲವು ವಿಚಾರಗಳ ಬಗ್ಗೆ ಇಂದು ಇಬ್ಬರು ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿದೆ. ಮೊದಲಿಗೆ ೪೦೦ ಬೆಡ್‌ನ ಆಸ್ಪತ್ರೆ ನಿರ್ಮಾಣವಾಗಲಿದ್ದು ಇದಕ್ಕಾಗಿ ರು. ೩೦೦ ಕೋಟಿ ಅನುದಾನಕ್ಕೆ ಮನವಿ ಮಾಡಿದ್ದು ಶೀಘ್ರ ಅನುದಾನವನ್ನು ಮಂಜೂರು ಮಾಡುವ ಬಗ್ಗೆ ಚರ್ಚೆ ನಡೆಸಿದ್ದೇನೆ.
-ಅಶೋಕ್ ರೈ, ಪುತ್ತೂರು ಶಾಸಕ.