ರೈತರ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಸರ್ಕಾರ

| Published : Jun 24 2024, 01:30 AM IST

ಸಾರಾಂಶ

ಚನ್ನಪಟ್ಟಣ: ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡದೇ ಸತಾಯಿಸುತ್ತಿದೆ. ಬಡಪರ, ರೈತಪರ ಸರ್ಕಾರ ಎಂದೆಲ್ಲಾ ಕೊಚ್ಚಿಕೊಳ್ಳುವವರು ರೈತರ ಬೆನ್ನಿಗೆ ಏಕೆ ನಿಲ್ಲುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.

ಚನ್ನಪಟ್ಟಣ: ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡದೇ ಸತಾಯಿಸುತ್ತಿದೆ. ಬಡಪರ, ರೈತಪರ ಸರ್ಕಾರ ಎಂದೆಲ್ಲಾ ಕೊಚ್ಚಿಕೊಳ್ಳುವವರು ರೈತರ ಬೆನ್ನಿಗೆ ಏಕೆ ನಿಲ್ಲುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು. ತಾಲೂಕಿನ ಬೈರಾಪಟ್ಟಣ ಗ್ರಾಮದ ಬಮೂಲ್ ಶಿಬಿರ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸದಸ್ಯರ ಮರಣ ಪರಿಹಾರ ಚೆಕ್ ಹಾಗೂ ರಾಸು ಮರಣ ಪರಿಹಾರ ಚೆಕ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಾತೆತ್ತಿದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಮ್ಮದು ಜನರ ಮನೆಬಾಗಿಲಿಗೆ ಹೋಗುವ ಸರ್ಕಾರ ಎನ್ನುತ್ತಾರೆ. ಆದರೆ, ಹಿಂದಿನಿಂದ ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಈ ಸರ್ಕಾರ ಬಂದ ಮೇಲೆ ನಿಲ್ಲಿಸಲಾಗಿದೆ. ಮೇವಿನ ಬೆಲೆ ಸಹ ಹೆಚ್ಚಳಗೊಂಡಿದೆ. ಇದೀಗ ಪೆಟ್ರೋಲ್ ಡಿಸೇಲ್ ಬೆಲೆಯನ್ನು ಸಹ ಹೆಚ್ಚಳ ಮಾಡಿದ್ದು, ಇದು ಸಹ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಲು ಉತ್ಪಾದಕರು ಶ್ರಮಜೀವಿಗಳು, ಅವರ ಬೆವರಿಗೆ ಬೆಲೆ ನೀಡಬೇಕಾದ್ದದ್ದು, ಸಹಕಾರ ಒಕ್ಕೂಟ ಹಾಗೂ ಸರ್ಕಾರದ ಕೆಲಸ. ನಮ್ಮ ರಾಜ್ಯ ಹೈನುಗಾರಿಕೆಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ಆದರೆ ಅಮೂಲ್ ವೇಗದಲ್ಲಿ ನಾವು ಬೆಳೆಯಲು ಇನ್ನು ಸಮಯ ಬೇಕು. ಹಾಲು ಉತ್ಪನ್ನಗಳನ್ನು ಹೆಚ್ಚಳ ಮಾಡಲು ವೈಜ್ಞಾನಿಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಬಮೂಲ್ ಅಧ್ಯಕ್ಷ ರಾಜ್‌ಕುಮಾರ್, ಉಪಾಧ್ಯಕ್ಷ ಮಂಜುನಾಥ್, ನಿರ್ದೇಶಕ ಎಚ್.ಸಿ. ಜಯಮುತ್ತು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರುದೊಡ್ಡಿ ಜಯರಾಮು, ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಹಾಪ್‌ಕಾಮ್ಸ್ ದೇವರಾಜು ಇತರರಿದ್ದರು.

ಪೊಟೋ೨೩ಸಿಪಿಟಿ೧: ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣದ ಬಮೂಲ್ ಶಿಬಿರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಲಾಯಿತು.

ಪೊಟೋ೨೩ಸಿಪಿಟಿ೨:

ತಾಲೂಕಿನ ಬೈರಾಪಟ್ಟಣದ ಬಮೂಲ್ ಶಿಬಿರ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು.

ಪೊಟೋ೨೩ಸಿಪಿಟಿ೩:

ತಾಲೂಕಿನ ಬೈರಾಪಟ್ಟಣದ ಬಮೂಲ್ ಶಿಬಿರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವವಿಸಲಾಯಿತು.

ಪೊಟೋ೨೩ಸಿಪಿಟಿ೪:

ತಾಲೂಕಿನ ಬೈರಾಪಟ್ಟಣದ ಬಮೂಲ್ ಶಿಬಿರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಚೆಕ್ ನೀಡಲಾಯಿತು.