ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ: ಗಂಟಿಹೊಳೆ

| Published : Jun 20 2024, 01:05 AM IST

ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ: ಗಂಟಿಹೊಳೆ
Share this Article
  • FB
  • TW
  • Linkdin
  • Email

ಸಾರಾಂಶ

ಹಕ್ಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಂವಾದ ಕಾರ್ಯಕ್ರಮ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಬೈಂದೂರು

ಶಾಸಕ ಗುರುರಾಜ ಗಂಟಿಹೊಳೆ ಅವರು ಬುಧವಾರ ಬೈಂದೂರಿನ ಹಕ್ಲಾಡಿ, ಮಾಸ್ತಿಕಟ್ಟೆಯ ವೆಂಕಮ್ಮ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಹಕ್ಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾದರು.

ಈ ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಗ್ರಾಮಗಳಲ್ಲಿ ಕ್ರಿಯಾ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿ, ಗ್ರಾಮದಲ್ಲಿ ಆಗಬೇಕಾದ ಅಭಿವೃದ್ಧಿ ಕೆಲಸಗಳು ಮತ್ತು ಆ ಗ್ರಾಮದಲ್ಲಿ ಯಾವ ಯಾವ ಅಭಿವೃದ್ಧಿ ಯೋಜನೆ ಕೈಗೊಂಡರೆ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎನ್ನುವ ಬಗ್ಗೆ ಖುದ್ದು ಗ್ರಾಮಸ್ಥರ ಜೊತೆಗೆ ಶಾಸಕರು ಚರ್ಚಿಸುವ ಕಾರ್ಯಕ್ರಮ ಇದಾಗಿದ್ದು, ಹಕ್ಲಾಡಿಯಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ನಡೆಯಿತು.

ಸಭೆಯಲ್ಲಿ ಶಾಸಕರು ಗ್ರಾಮಸ್ಥರಿಂದ ವಿವಿಧ ರೀತಿಯ ಆಹವಾಲು, ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು ಮತ್ತು ಆ ಸಮಸ್ಯೆಗಳನ್ನು ಪರಿಹರಿಸುವ, ಗ್ರಾಮಕ್ಕೆ ಅನುಕೂಲವಾಗುವಂತಹ ಯೋಜನೆಗಳನ್ನು ತರುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಮಾತುಕತೆ ನಡೆಸಿ ನಡೆಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.

ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ, ಆದರೂ ಹಠ ಬಿಡದೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಎಂದು ಶಾಸಕರು ಹೇಳಿದರು.

ಸಭೆಯಲ್ಲಿ ಹಕ್ಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮ ದೇವಾಡಿಗ, ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಬೂತ್ ಅಧ್ಯಕ್ಷರು ಉಪಸ್ಥಿತರಿದ್ದರು.‌