ಸಾರಾಂಶ
ಬೀದರ್:ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಕರ್ನಾಟಕ ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘ ಮನವಿ ಮಾಡಿದೆ.ಈ ಕುರಿತು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಬರೆದ ಮನವಿ ಸರ್ಕಾರಿ ಪಾಲಿಟೆಕ್ನಿಕ ಕಾಲೇಜಿನ ಪ್ರಾಚಾರ್ಯರಿಗೆ ಸಲ್ಲಿಸಿ ರಾಜ್ಯದಲ್ಲಿ ಸುಮಾರು 1400 ಅತಿಥಿ ಉಪನ್ಯಾಸಕರು ರಾಜ್ಯದ ಎಲ್ಲ ಸರ್ಕಾರಿ ಪಾಲಿಟೆಕ್ನಿಕ ಸಂಸ್ಥೆಗಳಲ್ಲಿ ಶೃದ್ಧೆ ಭಕ್ತಿಯಿಂದ ಕಾರ್ಯ ನಿರ್ವಹಿಸುತಿದ್ದಾರೆ. ಆದರೆ ನಮಗೆ ಪ್ರತಿ ತಿಂಗಳು ಮಾಸಿಕ ವೇತನ ನಿಡುತ್ತಿಲ್ಲ. ಇದರಿಂದ ನಮ್ಮ ಕುಟುಂಬದ ನಿರ್ವಹಣೆ ತುಂಬ ಕಷ್ಟಕರವಾಗಿದೆ.ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಮಾಸಿಕ ವೇತನ ಪ್ರತಿ ತಿಂಗಳು ಪಾವತಿಸಬೇಕು. ಅತಿಥಿ ಉಪನ್ಯಾಸಕರಿಗೆ ಆಕಸ್ಮಿಕ ರಜೆಗಳು 10 ಹಾಗೂ ನಿರ್ಬಂಧಿತ ರಜೆಗಳು 2 ಸಹ ಒಂದು ವರ್ಷದ ಅವಧಿಯಲ್ಲಿ ನೀಡಬೇಕು. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಮೀರಾಗಂಜಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಧುಸೂಧನ ಕುಲಕರ್ಣಿ ಹಾಗೂ ಜಿಲ್ಲಾಧ್ಯಕ್ಷ ಕೃಷ್ಣ್ಣಕಾಂತ ವಿಶ್ವಕರ್ಮ ಸೇರಿದಂತೆ ಇನ್ನಿತರರು ಇದ್ದರು.
--ಚಿತ್ರ 6ಬಿಡಿಆರ್56ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಬರೆದ ಮನವಿಯನ್ನು ಬೀದರ್ನ ಸರ್ಕಾರಿ ಪಾಲಿಟೆಕ್ನಿಕ ಕಾಲೇಜಿನ ಪ್ರಾಚಾರ್ಯರಿಗೆ ಸೋಮವಾರ ಸಲ್ಲಿಸಿದರು.--