ಸರ್ಕಾರಿ ಬಾಲಕಿಯರ ಪಿಯು ಕಾಲೇಜಿಗೆ ಶೇ. 91 ಫಲಿತಾಂಶ

| Published : Apr 14 2024, 01:45 AM IST

ಸಾರಾಂಶ

ವಾಣಿಜ್ಯ ವಿಭಾಗದಲ್ಲಿ- 33 ವಿದ್ಯಾರ್ಥಿನಿಯರು ಹಾಜರಾಗಿ 31 ವಿದ್ಯಾರ್ಥಿನಿಯರು ಉತೀರ್ಣರಾಗುವ ಮೂಲಕ ಶೇ. 94 ರಷ್ಟು ಫಲಿತಾಂಶ ಬಂದಿದೆ. ಇದರಲ್ಲಿ 9 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮೈಸೂರು

2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನಗರದ ಚಾಮರಾಜ ಜೋಡಿರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಶೇ. 91 ಫಲಿತಾಂಶ ಲಭಿಸಿದೆ.

ಪರೀಕ್ಷೆ ಬರೆದ ಒಟ್ಟು 89 ವಿದ್ಯಾರ್ಥಿನಿಯರ ಪೈಕಿ 81 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದು, 10 ವಿದ್ಯಾರ್ಥಿನಿಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ- 33 ವಿದ್ಯಾರ್ಥಿನಿಯರು ಹಾಜರಾಗಿ 31 ವಿದ್ಯಾರ್ಥಿನಿಯರು ಉತೀರ್ಣರಾಗುವ ಮೂಲಕ ಶೇ. 94 ರಷ್ಟು ಫಲಿತಾಂಶ ಬಂದಿದೆ. ಇದರಲ್ಲಿ 9 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಿ.ಎಸ್. ದೀಕ್ಷಿತ- 589 ಅಂಕಗಳನ್ನು ಗಳಿಸುವ ಮೂಲಕ ಇಡೀ ರಾಜ್ಯಕ್ಕೆ 7ನೇ ರ್ಯಾಂಕ್ ಗಳಿಸಿದ್ದಾರೆ. [ಅರ್ಥಶಾಸ್ತ್ರ ಹಾಗೂ ಇತಿಹಾಸ ವಿಷಯದಲ್ಲಿ 100ಕ್ಕೆ 100 ಅಂಕ ಗಳಿಸಿದ್ದಾರೆ.

ಕೆ. ಲಕ್ಷ್ಮೀ- 575, ಎನ್. ಶಿವರತ್ನ-547, ಗಗನಶ್ರೀ-544, ಸಾಕಮಣಿ- 543, ವರಲಕ್ಷ್ಮಿ- 542, ಎ.ಎಸ್. ಪೂರ್ವಿಕ - 539, ಎಂ. ದಿವ್ಯ- 512, ಪಿ. ಪವಿತ್ರ-512 ಅಂಕಗಳನ್ನು ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ - 31 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿ 30 ವಿದ್ಯಾರ್ಥಿನಿಯರು ಉತ್ತೀರ್ಣರಾಗಿ ಶೇ. 97 ಫಲಿತಾಂಶ ಬಂದಿದೆ. ಇದರಲ್ಲಿ ನಿತ್ಯಶ್ರೀ ಎಂಬ ವಿದ್ಯಾರ್ಥಿನಿ 514 ಅಂಕಗಳನ್ನು ಗಳಿಸುವ ಮೂಲಕ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ- 25 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿ 20 ವಿದ್ಯಾರ್ಥಿನಿಯರು ಉತ್ತೀರ್ಣರಾಗಿ ಶೇ. 80 ರಷ್ಟು ಫಲಿತಾಂಶ ಬಂದಿದೆ. ಇದರಲ್ಲಿ ಡಿ.ಆರ್. ಸೌಂದರ್ಯ 505 ಅಂಕಗಳನ್ನು ಪಡೆದು ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿನಿಯರನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು, ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.