ಸಾರಾಂಶ
ಹಿರೇಕೆರೂರು: ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.ತಾಲೂಕಿನ ಮಡ್ಲೂರು ಗ್ರಾಮದಲ್ಲಿ ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಯೋಜನೆಯಡಿಯ ರು. 66 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿ, ಅಲ್ಪಸಂಖ್ಯಾತ ಇಲಾಖೆಯಿಂದ ರು. 20 ಲಕ್ಷ ವೆಚ್ಚದಲ್ಲಿ ಶಾದಿಮಹಲ್ ನಿರ್ಮಾಣ ಕಾಮಗಾರಿ ಹಾಗೂ ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆ ಯೋಜನೆಯಡಿ ರು. 2.75 ಕೋಟಿ ವೆಚ್ಚದಲ್ಲಿ ಯಕ್ಕುಂಬಿ-ಮೊಳಕಾಲ್ಮುರು ರಾಜ್ಯ ಹೆದ್ದಾರಿಯಿಂದ ಹಾವೇರಿ -ಸಾಗರ ಹೆದ್ದಾರಿಗೆ ಕೂಡುವ ಮಡ್ಲೂರು- ಸಾತೇನಹಳ್ಳಿ-ಚಿಕ್ಕೋಣತಿ-ಚಿಕ್ಕೇರೂರು-ದಾಸನಕೊಪ್ಪ-ಹಂಸಭಾವಿ ರಾಜ್ಯ ಹೆದ್ದಾರಿ ರಸ್ತೆಯ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಹೊಂದಿದಾಗ ದೇಶದ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಹಳ್ಳಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದ್ದು, ರಸ್ತೆ, ಚರಂಡಿ, ಶುದ್ಧ ಕುಡಿಯುವ ನೀರಿನ ಘಟಕ, ಸಮುದಾಯ ಭವನಗಳು, ದೇವಸ್ಥಾನ ಜೀರ್ಣೋದ್ಧಾರ ಸೇರಿದಂತೆ ಅನೇಕ ಮೂಲ ಸೌಕರ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಲಲಿತವ್ವ ಬಡಿಗೇರ, ಪುಷ್ಪಾ ಪೂಜಾರ, ಬಸನಗೌಡ ಸೂಡಂಬೇರ, ರುದ್ರಪ್ಪ ಜೊಗುಂಡ್ರ, ಉಳಿವೆಪ್ಪ ಬೊಳೇರ, ನಿರಂಜನ ಜೊಗುಂಡ್ರ, ರುದ್ರಪ್ಪ ಚಕ್ಕಡಿ, ಲಲತವ್ವ ಚೊಗಚಿಕೊಪ್ಪ ಸೇರಿದಂತೆ ಗ್ರಾಮ ಪಂಚಾಯತ ಸದಸ್ಯರು, ವಿವಿಧ ಸಂಘ ಸಂಸ್ಥೆಗಳು ಪದಾಧಿಕಾರಿಗಳು ಗ್ರಾಮಸ್ಥರು ಅಧಿಕಾರಿಗಳು ಇದ್ದರು.