ಸಾರಾಂಶ
ಇಳಕಲ್ಲ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವೇಕ ಶಾಲಾ ಯೋಜನೆಯಡಿ ₹ ೪೧.೮೯ ಲಕ್ಷ ವೆಚ್ಚದಲ್ಲಿ ೨ ಕೊಠಡಿ ನಿರ್ಮಾಣಕ್ಕೆ ಶಾಸಕ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಭೂಮಿಪೂಜೆ ನೆರವೇರಿಸಿದರು.
ಇಳಕಲ್ಲ: ಓರ್ವ ಮಹಿಳೆ ಶಾಲೆ ಕಲಿತರೆ ಕುಟುಂಬವೇ ಶಾಲೆ ಕಲಿತಂತೆ ಎಂಬಂತೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿನ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚಿನ ಅನುದಾನ ನೀಡಿದೆ ಎಂದು ಲಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಬಾಗಲಕೋಟೆ ೨೦೨೨-೨೩ನೇ ಸಾಲಿನ ವಿವೇಕ ಶಾಲಾ ಯೋಜನೆಯಡಿಯಲ್ಲಿ ಅಂದಾಜು ಮೊತ್ತ ₹ ೪೧.೮೯ ಲಕ್ಷ ವೆಚ್ಚದಲ್ಲಿ ನೂತನ ೨ ಕೊಠಡಿ ನಿರ್ಮಾಣದ ಭೂಮಿಪೂಜೆ ಮಾಡಿ ಮಾತನಾಡಿ, ಸರ್ಕಾರ ಅನುದಾನ ಕೊಡುತ್ತದೆ. ನೀವು ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣ ಕೊಡಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.