ಅನುದಾನಿತ ಶಾಲೆ ಮುಚ್ಚಲು ಸರ್ಕಾರದ ಹುನ್ನಾರ: ಎಸ್.ಎಲ್. ಭೋಜೇಗೌಡ

| Published : May 24 2024, 12:54 AM IST

ಅನುದಾನಿತ ಶಾಲೆ ಮುಚ್ಚಲು ಸರ್ಕಾರದ ಹುನ್ನಾರ: ಎಸ್.ಎಲ್. ಭೋಜೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಹಿಂದೆ ಬಿಜೆಪಿ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಕೆ.ಪಿ.ಎಸ್. ಶಾಲೆಗಳು, ಮೊರಾರ್ಜಿ ಮತ್ತು ಅಂಬೇಡ್ಕರ್ ವಸತಿ ಶಾಲೆಗಳನ್ನು ತೆರೆಯಲಾಗಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರದ ಶಿಕ್ಷಣದ ತಪ್ಪು ನೀತಿಗಳಿಂದ ಸಾವಿರಾರು ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ ಎಂದು ಭೋಜೇಗೌಡ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಖಾಲಿ ಇರುವ ಶಿಕ್ಷಕರ ನೇಮಕಾತಿ ಮತ್ತು ಇತರ ಮೂಲಸೌಕರ್‍ಯಗಳನ್ನು ಕಲ್ಪಿಸದೆ ಅನುದಾನಿದಾನಿತ ಶಾಲೆಗಳನ್ನು ಮುಚ್ಚಲು ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ನೈಋತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಆರೋಪಿಸಿದರು.

ಅವರು ಗುರುವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಹಿಂದೆ ಬಿಜೆಪಿ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಕೆ.ಪಿ.ಎಸ್. ಶಾಲೆಗಳು, ಮೊರಾರ್ಜಿ ಮತ್ತು ಅಂಬೇಡ್ಕರ್ ವಸತಿ ಶಾಲೆಗಳನ್ನು ತೆರೆಯಲಾಗಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರದ ಶಿಕ್ಷಣದ ತಪ್ಪು ನೀತಿಗಳಿಂದ ಸಾವಿರಾರು ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ ಎಂದರು.

* ಉದ್ಯೋಗ ಸೃಷ್ಟಿಗೆ ಯತ್ನ

ಇದೇ ಸಂದರ್ಭದಲ್ಲಿ ಮಾತನಾಡಿದ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಪ್ರತಿವರ್ಷ ರಾಜ್ಯದಲ್ಲಿ ೨ ಲಕ್ಷ ಯುವತಿಯರು ಮತ್ತು ೧.೭೦ ಲಕ್ಷ ಯುವಕರು ಪದವಿ ಪಡೆಯುತ್ತಿದ್ದು, ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೌಶಲ್ಯ ಕೇಂದ್ರಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಹೆಚ್ಚಿನ ಉದ್ಯೋಗಾವಕಾಶ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಶಾಸಕ ಯಶ್ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಡಿ.ಎಸ್. ಅರುಣ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಸುರೇಶ್ ನಾಯಕ್ ಮತ್ತು ಉದಯ ಕುಮಾರ್ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಮೊದಲಾದವರಿದ್ದರು.