ಸಾರಾಂಶ
ಕನ್ನಡಪ್ರಭ ವಾರ್ತೆ, ಕಡೂರು
ತಾಲೂಕಿನ ಮಲ್ಲೇಶ್ವರದ ಬೆಂಕಿ ಲಕ್ಷ್ಮಯ್ಯ ಸಭಾಂಗಣದಲ್ಲಿ ಸರಕಾರದ ನಡೆ ಕಾರ್ಯಕರ್ತರ ಕಡೆ ಘೋಷಣೆಯಡಿ ಏ. 22 ರಂದು ಬೃಹತ್ ಸಮಾರಂಭ ಆಯೋಜಿಸಲಾಗಿದೆ ಎಂದು ಕಡೂರು-ಬೀರೂರು ಬ್ಲಾಕ್ ಗಳ ಕೆಪಿಸಿಸಿ ವೀಕ್ಷಕ ಎನ್. ರಮೇಶ್ ತಿಳಿಸಿದರು.ಶುಕ್ರವಾರ ಪಟ್ಟಣದ ಟಿಡಿಎಸ್ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರವಾರು ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುತ್ತಿದೆ. ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗುತ್ತದೆ. ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯ ಕರ್ತರು ಭಾಗವಹಿಸಲಿದ್ದಾರೆ. ಅದಕ್ಕಾಗಿ ಅಗತ್ಯ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದೆ ಎಂದರು. ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಚ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪಕ್ಷದ ಹಿರಿಯ ಮುಖಂಡರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ. ವಿನೂತನ ಕಾರ್ಯಕ್ರಮ ದೊಂದಿಗೆ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ವಿಸ್ತಾರಗೊಳಿಸಲು ಪಕ್ಷದ ಕಾರ್ಯಕರ್ತರೊಂದಿಗೆ ಜನರಿಗೆ ತಲುಪುವ ಕಾರ್ಯ ಮಾಡಲಾಗುತ್ತದೆ. ಎಂದರು. ಈ ಸಂದರ್ಭದಲ್ಲಿ ಶಾಸಕ ಕೆ.ಎಸ್.ಆನಂದ್, ಪುರಸಭೆ ಅಧ್ಯಕ್ಷ ಭಂಡಾರಿಶ್ರೀನಿವಾಸ್, ಜಿಪಂ ಮಾಜಿ ಸದಸ್ಯ ಶರತ್ ಕೃಷ್ಣ ಮೂರ್ತಿ, ಕಡೂರು-ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಸೂರುಚಂದ್ರಮೌಳಿ, ಆಸಂದಿ ಕಲ್ಲೇಶ್, ಗುಮ್ಮನಹಳ್ಳಿ ಅಶೋಕ್, ಸವಿತಾಪಾಟೀಲ್, ಸೈಯ್ಯದ್ ಯಾಸೀನ್, ಕಂಸಾಗರ ರೇವಣ್ಣ, ಲೋಲಾಕ್ಷಿಬಾಯಿ, ಈರಳ್ಳಿರಮೇಶ್ ಮತ್ತಿತರಿದ್ದರು. 18ಕೆಕೆಡಿಯು3..
ಸರಕಾರದ ನಡೆ ಕಾರ್ಯಕರ್ತರ ಕಡೆ ಬೃಹತ್ ಸಮಾರಂಭದ ಆಯೋಜನೆ ಕುರಿತು ಸಭೆ ನಡೆಯಿತು.