ಸರ್ಕಾರದ ಯೋಜನೆಗಳು ಜನರಿಗೆ ತಲುಪಿಸಬೇಕು: ತಣಿಗೇಬೈಲು ರಮೇಶ್

| Published : Dec 02 2024, 01:18 AM IST

ಸಾರಾಂಶ

ತರೀಕೆರೆ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು ಈ ಯೋಜನೆಗಳು ಜನರಿಗೆ ತಲುಪಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತಣಿಗೇಬೈಲು ರಮೇಶ್ ಗೋವಿಂದೇಗೌಡ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಾಡಾಗಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು ಈ ಯೋಜನೆಗಳು ಜನರಿಗೆ ತಲುಪಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತಣಿಗೇಬೈಲು ರಮೇಶ್ ಗೋವಿಂದೇಗೌಡ ಹೇಳಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಾಡಾಗಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಆಹಾರ ಮತ್ತು ಪಡಿತರ ಶಿರಸ್ತೆದಾರರಾದ ಜಗದೀಶ್ ಮಾತನಾಡಿ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಹಾಗೂ ತಿದ್ದುಪಡಿ ಸೇರ್ಪಡೆ ಬದಲಾವಣೆಗೂ ಸಹ ಸರ್ಕಾರ ಅವಕಾಶ ಕೊಟ್ಟಿಲ್ಲ. ಮುಂದೆ ಅವಕಾಶ ಕೊಟ್ಟಾಗ ಗ್ರಾಮ ಒನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಹೇಳಿದರು. ಸಮಿತಿ ಸದಸ್ಯರಾದ ಎಚ್ . ಎಸ್ . ಮೆಹಬೂಬ್ ಮಾತನಾಡಿ ಗ್ರಾಮಾಂತರ ಹಳ್ಳಿಗಳಿಗೆ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲ ನಂದಿ, ಸುಣ್ಣದ ಹಳ್ಳಿ ಗ್ರಾಮಗಳ ಹೆಣ್ಣು ಮಕ್ಕಳು ಮಹಿಳೆಯರು ಹಾಗೂ ಶಾಲಾ ಮಕ್ಕಳು ಪ್ರತಿದಿನ ಬಸ್ ಸಂಪರ್ಕವಿಲ್ಲದೆ ಪರದಾಡುತ್ತಿದ್ದಾರೆ. ತರೀಕೆರೆ ತಾಲೂಕಿನಲ್ಲಿ ಡಿಪೋ ನಿರ್ಮಾಣ ಮಾಡಿ ಸಾರಿಗೆ ವ್ಯವಸ್ಥೆ ಮಾಡಿರಿ ಎಂದು ಕೇಳಿದ ಪ್ರಶ್ನೆಗೆ ಶಕ್ತಿ ಯೋಜನೆ ಕುರಿತು ಸಾರಿಗೆ ಅಧಿಕಾರಿಗಳು ಶಾಸಕರು ಪ್ರಯತ್ನ ಮಾಡಿದರೆ ಡಿಪೋ ಮಂಜೂರಾತಿ ಮಾಡಿಸಬೇಕು ಎಂದು ಹೇಳಿದರು.

ಗೃಹಜೋತಿ ಪ್ರಗತಿ ಕುರಿತು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮಂಜುನಾಥ್ ಸಭೆಗೆ ತಿಳಿಸಿದರು. ಯುವನಿಧಿ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ದೇವೇಂದ್ರಪ್ಪ ವಿವರಿಸಿದರು. ಸದಸ್ಯರಾದ ರತ್ನಮ್ಮ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.

ಕೆಟಿಆರ್.ಕೆ.12ಃ

ತರೀಕೆರೆಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತಣಿಗೇಬೈಲು ರಮೇಶ್ ಗೋವಿಂದೇಗೌಡ ಮಾತನಾಡಿದರು. ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಡಾ.ದೇವೇಂದ್ರಪ್ಪ ಮತ್ತಿತರರು ಇದ್ದರು.