ತಿಪಟೂರು: ಸರ್ಕಾರಿ ಶಾಲಾ ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು ಎಂದು ಜೆಡಿಎಸ್ ಮುಖಂಡ ಕೆಟಿ ಶಾಂತಕುಮಾರ್ ತಿಳಿಸಿದರು.

ತಿಪಟೂರು: ಸರ್ಕಾರಿ ಶಾಲಾ ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು ಎಂದು ಜೆಡಿಎಸ್ ಮುಖಂಡ ಕೆಟಿ ಶಾಂತಕುಮಾರ್ ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿ ಹೊಸಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಾದ ಎಚ್. ಎಲ್. ಶಾಂಭವಿ ಹಾಗೂ ಎಚ್. ವಿ. ಮಾನ್ಯ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ರಾಷ್ಟ್ರಮಟ್ಟದ ಥ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡದಿಂದ ಭಾಗವಹಿಸಿ ಮುಂಬೈ ತಂಡವನ್ನು ಸೋಲಿಸಿ, ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿರುವ ಈ ಇಬ್ಬರು ವಿದ್ಯಾರ್ಥಿನಿಯರನ್ನು ಅಭಿನಂದಿಸಿ ಪ್ರೋತ್ಸಾಹಿಸಿ ನಗದು ಬಹುಮಾನ ನೀಡಿ ಮಾತನಾಡಿದ ಕೆ ಟಿ ಶಾಂತಕುಮಾರ್ ಅವರು, ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿದ ವಿದ್ಯಾರ್ಥಿನಿಯರು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಶಾಲೆಯ ಶಿಕ್ಷಕರು ಹಾಗೂ ಪೋಷಕರು ಗ್ರಾಮಸ್ಥರು ಕಾರಣಕರ್ತರಾಗಿದ್ದಾರೆ. ಕ್ರೀಡೆ ಹಾಗೂ ಶಿಕ್ಷಣಕ್ಕೆ ಮೂಲ ಸೌಲಭ್ಯಗಳಿಲ್ಲದೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆ ಮುಚ್ಚುವ ಪರಿಸ್ಥಿತಿ ಅನೇಕ ಭಾಗಗಳಲ್ಲಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದು, ಗ್ರಾಮೀಣ ಪ್ರತಿಭೆಗಳಿಗೂ ಪೂರಕ ವಾತಾವರಣ ಅಗತ್ಯ. ಇಂದು ಚಿನ್ನದ ಪದಕ ಪಡೆದ ಈ ಶಾಲೆಯ ವಿದ್ಯಾರ್ಥಿನಿಯರು ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದೆ ಈ ಸಾಧನೆ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈ ವಿದ್ಯಾರ್ಥಿಗಳು ಮುಂಬರುವ ದಿನಗಳಲ್ಲಿ ರಾಷ್ಟ್ರಮಟ್ಟದ ಒಲಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸುವುದರಲ್ಲಿ ಸಂದೇಹವಿಲ್ಲ. ಪ್ರತಿಭೆಗಳನ್ನು ಗುರುತಿಸಬೇಕು, ಅಮೇರಿಕಾ ಚೀನಾ, ಜಪಾನ್ ನಂತೆ ಕ್ರೀಡಾಸಕ್ತರಿಗೆ ಅವಕಾಶ ದೊರಕಬೇಕು. ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದಿದ್ದೇನೆ, ಗ್ರಾಮೀಣ ಮಕ್ಕಳ ಸಾಧನೆ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ. ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರೋತ್ಸಾಹ ನೀಡುತ್ತೇನೆ, ಪ್ರತಿಯೊಬ್ಬರೂ ಕೂಡ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡಬೇಕು. ಮುಂದಿನ ದಿನಗಳಲ್ಲಿ ಈ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಹೆಚ್ಚಿನ ಸಹಕಾರ ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರೇವಂತ್, ಪ್ರಾಂಶುಪಾಲ ಭರತ್, ಜೆಡಿಎಸ್ ಪಕ್ಷದ ಯುವ ಮುಖಂಡ ಸುದರ್ಶನ್ ಮತ್ತಿತರದ್ದರು.