ಸಾರಾಂಶ
ಮುಂಬರುವ ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಆಗ್ರಹಿಸಿ ಕರುನಾಡ ವಿಜಯಸೇನೆ ಸಂಘಟನೆಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಚಿತ್ರದುರ್ಗ: ಮುಂಬರುವ ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಆಗ್ರಹಿಸಿ ಕರುನಾಡ ವಿಜಯಸೇನೆ ಸಂಘಟನೆಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ಮಕ್ಕಳು ಹಾಗೂ ಪೋಷಕರು ಖಾಸಗಿ ಶಾಲೆಗಳ ಮೇಲೆ ವ್ಯಾಮೋಹವಿಟ್ಟುಕೊಂಡಿರುವುದರಿಂದ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಮುಖ್ಯಮಂತ್ರಿಯಿಂದ ಹಿಡಿದು ಉನ್ನತ ಹುದ್ದೆಯಲ್ಲಿರುವ ಬಹುತೇಕ ಅಧಿಕಾರಿಗಳು ಸರ್ಕಾರಿ ಶಾಲೆಗಳಲ್ಲಿಯೇ ಓದಿರುವುದು ಎನ್ನುವುದನ್ನು ಶಿಕ್ಷಣ ಸಚಿವರು ಮರೆಯಬಾರದೆಂದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್‍ನಲ್ಲಿ ಶಿಕ್ಷಣಕ್ಕೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ಮೀಸಲಿಡಬೇಕೆಂದು ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಎಸ್.ಗೋಪಿನಾಥ್, ಕಾರ್ಯದರ್ಶಿ ಸಿ.ಜಗದೀಶ್, ಉಪಾಧ್ಯಕ್ಷೆ ರತ್ನಮ್ಮ, ಮುಜಾಹಿದ್, ನಿಸಾರ್ ಅಹಮದ್, ಮೋಹನ್‍ಕುಮಾರ್, ಅಣ್ಣಪ್ಪ, ಯರ್ರಿಸ್ವಾಮಿ, ಸಿ.ತಿಪ್ಪೇಸ್ವಾಮಿ, ಪಾಂಡು, ಯಶವಂತ್, ಕಮಲ, ರಾಮಾಂಜನೇಯ, ಮಧು, ಅಖಿಲೇಶ್ ಸುರೇಶ್, ಅವಿನಾಶ್, ನಾಗರಾ ಜ್‍ಮುತ್ತು, ಹರೀಶ್‍ಕುಮಾರ್, ನಾಗೇಶ್ ಪಾಲ್ಗೊಂಡಿದ್ದರು.