ಉಡುಪಿ: ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಬೌದ್ಧಿಕವಾಗಿಯೂ, ಮಾನಸಿಕವಾಗಿಯೂ ಸಮರ್ಥರಿದ್ದಾರೆ. ಅವರಿಗೆ ಅನುಕೂಲತೆಗಳನ್ನು ಮತ್ತು ಅವಕಾಶಗಳನ್ನು ಒದಗಿಸಿಕೊಟ್ಟರೆ ಅವರು ಉನ್ನತವಾದ ಸಾಧನೆಯನ್ನು ಮಾಡಬಲ್ಲರು. ಈ ದಿಸೆಯಲ್ಲಿ ಸಂಘ ಸಂಸ್ಥೆಗಳು ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಡುಗೆಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಅಭಿಪ್ರಾಯಪಟ್ಟರು. ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಮಣಿಪಾಲ್ ಪೇಮೆಂಟ್ ಅಂಡ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ಅವರಿಂದ ಸುನಿಧಿ ಫೌಂಡೇಶನ್ ಟ್ರಸ್ಟ್ ಮೂಲಕ ಕೊಡಮಾಡಲಾದ ಸುಮಾರು 2 ಲಕ್ಷ ರು. ಮೌಲ್ಯದ ವಿಜ್ಞಾನ ಪ್ರಯೋಗೋಪಕರಣಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕನ್ನಡ ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ, ಸುನಿಧಿ ಫೌಂಡೇಶನ್ ನ ರೂಪಶ್ರೀ ರತ್ನಾಕರ್, ಪ್ರಾಂಶುಪಾಲ ಜಗದೀಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಡಯಟ್ ಉಪನ್ಯಾಸಕ ಯೋಗ ನರಸಿಂಹಸ್ವಾಮಿ, ಮುಖ್ಯೋಪಾಧ್ಯಾಯಿನಿ ಇಂದಿರಾ ಬಿ. ಮತ್ತು ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬಲ್ಲರು: ಗಫೂರ್
ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಬೌದ್ಧಿಕವಾಗಿಯೂ, ಮಾನಸಿಕವಾಗಿಯೂ ಸಮರ್ಥರಿದ್ದಾರೆ. ಅವರಿಗೆ ಅನುಕೂಲತೆಗಳನ್ನು ಮತ್ತು ಅವಕಾಶಗಳನ್ನು ಒದಗಿಸಿಕೊಟ್ಟರೆ ಅವರು ಉನ್ನತವಾದ ಸಾಧನೆಯನ್ನು ಮಾಡಬಲ್ಲರು. ಈ ದಿಸೆಯಲ್ಲಿ ಸಂಘ ಸಂಸ್ಥೆಗಳು ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಡುಗೆಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಅಭಿಪ್ರಾಯಪಟ್ಟರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.