ತರೀಕೆರೆಎಲ್ಲರ ಸಹಕಾರದಿಂದ ಸರ್ಕಾರಿ ಶಾಲೆಗಳು ಅಭಿವೃದ್ಧಿ ಪಥದಲ್ಲಿ ಸಾಗಲು ಸಾಧ್ಯವಾಗುತ್ತದೆ ಎಂದು ಪುರಸಭೆ ಸದಸ್ಯ ಚಂದ್ರಶೇಖರ್ ಟಿ.ಆರ್. ಹೇಳಿದ್ದಾರೆ.
- ಸ.ಹಿ.ಪ್ರಾ. ಶಾಲೆ ವತಿಯಿಂದ ಚಿಣ್ಣರ ಚಿಲಿಪಿಲಿ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ
ಕನ್ನಡಪ್ರಭ ವಾರ್ತೆ, ತರೀಕೆರೆಎಲ್ಲರ ಸಹಕಾರದಿಂದ ಸರ್ಕಾರಿ ಶಾಲೆಗಳು ಅಭಿವೃದ್ಧಿ ಪಥದಲ್ಲಿ ಸಾಗಲು ಸಾಧ್ಯವಾಗುತ್ತದೆ ಎಂದು ಪುರಸಭೆ ಸದಸ್ಯ ಚಂದ್ರಶೇಖರ್ ಟಿ.ಆರ್. ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕಮಗಳೂುರು, ತಾಲೂಕು ಪಂಚಾಯಿತಿ, ಪುರಸಭೆ, ತರೀಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ, ಕುವೆಂಪು ನಗರ, ಗಾಳಿಹಳ್ಳಿ ಕ್ರಾಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಿಣ್ಣರ ಚಿಲಿಪಿಲಿ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಈ ಶಾಲೆಯಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ಬಹಳ ಉತ್ತಮ ಮತ್ತು ಕ್ರೀಯಾಶೀಲವಾಗಿವೆ. ಹೀಗಾಗಿ ಈ ಶಾಲೆಯಲ್ಲಿ ವರ್ಷ ವರ್ಷಕ್ಕೂ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚುತ್ತಾ ಬರುತ್ತಿದೆ. ಇದಕ್ಕೆ ಪೂರಕವಾಗಿ ಶಾಲಾಭಿವೃದ್ಧಿ ಸಮಿತಿ, ಶಿಕ್ಷಕರು, ಸಿಬ್ಬಂದಿ ಶ್ರಮದಿಂದ ಇದು ಸಾಧ್ಯವಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಸಿ.ಆರ್.ಅನಂತಪ್ಪ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಸಿಗದಿದ್ದರೆ ಅಂತಹ ಶಾಲೆಗಳಿಗೆ ಪೋಷಕರು ಮಕ್ಕಳನ್ನು ಸೇರಿಸುವುದಿಲ್ಲ, ಶಾಲೆಯಲ್ಲಿ ಪ್ರತಿಭಾ ಕಾರಂಜಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಮಕ್ಕಳ ಪ್ರತಿಭೆಯನ್ನು ಶಿಕ್ಷಕರು ಗುರುತಿಸಬಹುದು. ಈ ಶಾಲೆ ಯಲ್ಲಿ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣವೇ ದಾಖಲಾತಿ ಹೆಚ್ಚಳಕ್ಕೆ ಕಾರಣ ಎಂದು ಹೇಳಿದರು.ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಎಂ.ಬಿ.ರಾಮಚಂದ್ರಪ್ಪ ಮಾತನಾಡಿ ಸರ್ಕಾರಿ ಶಾಲೆ ಶೈಕ್ಷಣಿಕ ಪ್ರಗತಿ ಸಾಧಿಸಲು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ನಾಗರಾಜ್, ಶಾಲೆ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿ ಕಾರ್ಯ ಅತ್ಯಂತ ಲವಲವಿಕೆಯಿಂದ ಕಾರ್ಯನಿರ್ವಹಿಸುತ್ತಾರೆ ಎಂದು ಹೇಳಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ನಾಗರಾಜ್ ಮಾತನಾಡಿ 4ನೇ ವರ್ಷದ ಕಾರ್ಯಕ್ರಮ ಪೋಷಕರು, ಶಾಲಾ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿ ಸಹಕಾರದಿಂದ ಅದ್ಧೂರಿಯಾಗಿ ನಡೆಯುತ್ತಿದೆ. ಪಾಠ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ಭಾಗವಹಿಸುತ್ತಿದ್ದಾರೆ. ಶಾಲೆಗಳನ್ನು ದೇವಸ್ಥಾನದಂತೆ ನೋಡಬೇಕು. ಮಕ್ಕಳು ದೇವರು ಇದ್ದಹಾಗೆ ಎಂದ ಅವರು ಶಾಲೆಗೆ ಕೊಠಡಿಗಳ ಕೊರತೆ ಇದೆ. ಹೆಚ್ಚುವರಿ ಕೊಠಡಿಗಳು ಮತ್ತು ಶಾಲೆಗೆ ಕಾಂಪೌಂಡ್ ಅಗತ್ಯವಾಗಿದೆ ಎಂದರು.ತಾಪಂ ನಿವೃತ್ತ ಕಾರ್ಯ ನಿರ್ವಹಣಾಧಿಕಾರಿ ವಿಶಾಲಾಕ್ಷಮ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರಣೇಶ್ ದಲಿತ ಸಂಘಟನೆಗಳ ಮುಖಂಡ ಬಾಲರಾಜ್, ದಾನಿ ಟಿ.ಕೆ.ಕುಮಾರ್, ಶಿಕ್ಷಕರ ಸಂಘ ನಿರ್ದೇಶಕ ಮಂಜುನಾಥ್, ಮುಖ್ಯ ಶಿಕ್ಷಕ ತಿಮ್ಮಾರೆಡ್ಡಿ, ಶಿಕ್ಷಕ ನಾಗರಾಜ್, ಶ್ರೀನಿವಾಸ್, ಶಿಕ್ಷಕರು, ಶಾಲಾ ಸಿಬ್ಬಂದಿ ಭಾಗವಹಿಸಿದ್ದರು.
-8ಕೆಟಿಆರ್.ಕೆ.1ಃ
ತರೀಕೆರೆಯಲ್ಲಿ ಕುವೆಂಪು ನಗರ, ಗಾಳಿಹಳ್ಳಿ ಕ್ರಾಸ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ನಡೆದಚಿಣ್ಣರ ಚಿಲಿಪಿಲಿ ಮತ್ತು ಪ್ರತಿಭಾ ಪುರಸ್ಕಾರದ ಉದ್ಘಾಟನೆಯನ್ನು ಪುರಸಭೆ ಸದಸ್ಯ ಚಂದ್ರಶೇಖರ್ ಟಿ.ಆರ್. ನೆರವೇರಿಸಿದರು. ಎಸ್.ಡಿಎಂಸಿಅದ್ಯಕ್ಷ ನಾಗರಾಜ್ ಕೆ.ಸ.ನೌ.ಸಂಘದ ಅಧ್ಯಕ್ಷ ಸಿ.ಆರ್.ಅನಂತಪ್ಪ,ಮುಖ್ಯ ಶಿಕ್ಷಕ ತಿಮ್ಮಾರೆಡ್ಡಿ ಮತ್ತಿತರರು ಇದ್ದರು.