ಸಾರಾಂಶ
ಹೊಸಕೋಟೆ: ಖಾಸಗಿ ಶಾಲೆಗಳಷ್ಟೆ ಗುಣಾತ್ಮಕ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿದ್ದು ಅಗತ್ಯ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಎಸ್.ರಾಜ್ ಕುಮಾರ್ ತಿಳಿಸಿದರು.
ಹೊಸಕೋಟೆ: ಖಾಸಗಿ ಶಾಲೆಗಳಷ್ಟೆ ಗುಣಾತ್ಮಕ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿದ್ದು ಅಗತ್ಯ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಎಸ್.ರಾಜ್ ಕುಮಾರ್ ತಿಳಿಸಿದರು.
ನಗರದ ಜಿಕೆಬಿಎಂಎಸ್ ಶಾಲೆ ವಿದ್ಯಾರ್ಥಿಗಳಿಗೆ ಶೂ ಹಾಗೂ ಸಾಕ್ಸ್‌ಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು, ಪೋಷಕರಲ್ಲಿ ಆಂಗ್ಲಭಾಷಾ ವ್ಯಾಮೋಹದ ಪರಿಣಾಮವಾಗಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಲಕ್ಷಾಂತರ ರು. ಶುಲ್ಕ ಪಾವತಿಸಿ ದಾಖಲಿಸುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಿಗೆ ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ ಸಹ ವಿತರಣೆ ಮಾಡುತ್ತಿದ್ದು ಮಕ್ಕಳ ಶಿಕ್ಷಣದ ಜೊತೆಗೆ ದೈಹಿಕ ಸಮತೋಲವನ್ನು ಸಹ ಕಾಪಾಡುತ್ತಿದೆ. ಅಷ್ಟೇ ಅಲ್ಲದೆ ಶಿಕ್ಷಕರಿಗೆ ಅಗತ್ಯ ತರಬೆತಿಯನ್ನು ಕಾಲಕಾಲಕ್ಕೆ ನೀಡುತ್ತಾ ಆಂಗ್ಲ ಮಾಧ್ಯಮವನ್ನು ಸಹ ಭೋಧನೆ ಮಾಡಲಾಗುತ್ತಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡಬೇಕು ಎಂದರು.ಪ್ರಮುಖವಾಗಿ ಶಾಲೆಯಲ್ಲಿ 827 ವಿದ್ಯಾರ್ಥಿಗಳಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಪ್ರಾಥಮಿಕ ಶಾಲೆಯಲ್ಲಿ ಅತಿ ಹೆಚ್ಚು ದಾಖಲಾತಿ ಹೊಂದಿರುವ ಶಾಲೆ ನಮ್ಮದಾಗಿದೆ. ಸರ್ಕಾರದಿಂದ ನೀಡಲಾದ ಒಂದು ಜೊತೆ ಶೂ ಹಾಗೂ ಎರಡು ಜೊತೆ ಸಾಕ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ ಎಂದರು. ಮುಖ್ಯ ಶಿಕ್ಷಕಿ ಬಾಲನಾಗಮ್ಮ, ಶಿಕ್ಷಕ ವರ್ಗ ಹಾಜರಿದ್ದರು.
ಫೋಟೋ: 11 ಹೆಚ್‌ಎಸ್‌ಕೆ 2ಹೊಸಕೋಟೆಯ ಜಿಕೆಬಿಎಂಎಸ್ ಶಾಲೆ ವಿದ್ಯಾರ್ಥಿಗಳಿಗೆ ಶೂ ಹಾಗು ಸಾಕ್ಸ್‌ಗಳನ್ನು ಎಸ್‌ಡಿಎಂಸಿ ಅಧ್ಯಕ್ಷ ಡಿ.ಎಸ್.ರಾಜ್‌ಕುಮಾರ್ ವಿತರಿಸಿದರು.