ಸುಹಾಸ್‌ ಶೆಟ್ಟಿ ಕೊಲೆಗೆ ಸರ್ಕಾರವೇ ಹೊಣೆ, ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು

| Published : May 04 2025, 01:30 AM IST

ಸುಹಾಸ್‌ ಶೆಟ್ಟಿ ಕೊಲೆಗೆ ಸರ್ಕಾರವೇ ಹೊಣೆ, ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ಹಿಂದೂ ಸಮಾಜ ಕಾರ್ಯಕರ್ತನೊಬ್ಬನನ್ನು ಕಳೆದುಕೊಂಡಿರುವ ಈ ಸಂದರ್ಭದಲ್ಲಿ ರಾಜ್ಯದ ಗೃಹ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಓಲೈಕೆ ರಾಜಕಾರಣದ ಮುಂದುವರಿದ ಭಾಗವಾಗಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಹಿಂದೂ ನಾಯಕರನ್ನು ಕಡೆಗಣಿಸಿ ಕೇವಲ ಮುಸ್ಲಿಂ ಮುಖಂಡರ ಸಭೆ ನಡೆಸಿದ್ದಾರೆ. ಇವರು ಕೇವಲ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಸಚಿವರು ಎಂಬುದನ್ನು ನೆನಪಿಟ್ಟುಕೊಳ್ಳಬೇಕು ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಸುಹಾಸ್ ಶೆಟ್ಟಿಯವರ ಹತ್ಯೆಗೆ ಸಂಬಂಧಿಸಿದಂತೆ, ಮತೀಯವಾದಿಗಳು ಒಂದು ತಿಂಗಳ ಹಿಂದೆಯೇ ಕೊಲ್ಲುತ್ತೇವೆ ಹಾಗೂ ಹತ್ಯೆಯ ನಂತರ ಫಿನಿಶ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವುದು ಪೊಲೀಸ್ ಇಲಾಖೆಯ ವೈಫಲ್ಯ ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹೇಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಮತಾಂಧರ ಈ ಧೈರ್ಯಕ್ಕೆ ಕಾಂಗ್ರೆಸ್ ಸರ್ಕಾರದ ಪರೋಕ್ಷ ಸಹಕಾರವೇ ಕಾರಣ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ಸಮಾಜ ಕಾರ್ಯಕರ್ತನೊಬ್ಬನನ್ನು ಕಳೆದುಕೊಂಡಿರುವ ಈ ಸಂದರ್ಭದಲ್ಲಿ ರಾಜ್ಯದ ಗೃಹ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಓಲೈಕೆ ರಾಜಕಾರಣದ ಮುಂದುವರಿದ ಭಾಗವಾಗಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಹಿಂದೂ ನಾಯಕರನ್ನು ಕಡೆಗಣಿಸಿ ಕೇವಲ ಮುಸ್ಲಿಂ ಮುಖಂಡರ ಸಭೆ ನಡೆಸಿದ್ದಾರೆ. ಇವರು ಕೇವಲ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಸಚಿವರು ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಇಂತಹ ಹಿಂದೂ ವಿರೋಧಿ ಸರ್ಕಾರದಿಂದ ಸುಹಾಸ್ ಶೆಟ್ಟಿ ಸಾವಿಗೆ ನ್ಯಾಯ ಸಾಧ್ಯವಿಲ್ಲ. ಕೂಡಲೇ ಈ ತನಿಖೆಯನ್ನು ಎನ್.ಐ.ಎಗೆ ವಹಿಸಬೇಕು ಎಂದು ಅವರು ಆಗ್ರಹಿಸಿದರು.