ಹುನಗುಂದ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರಾಂಗಣದಲ್ಲಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದಿಂದ ಆರಂಭಿಸಿರುವ ಸೂರ್ಯಕಾಂತಿ ಬೆಂಬಲ ಬೆಲೆ ಖರೀದಿ ಕೇಂದ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಹುನಗುಂದ
ನಮ್ಮ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ರೈತರು ಬೆಳೆದ ಹೆಸರು, ತೊಗರಿ, ಸೂರ್ಯಕಾಂತಿ, ಕಡಲೆ, ಈರುಳ್ಳಿ ಸೇರಿ ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ರೈತರ ಹಿತ ಕಾಪಾಡಿದೆ ಎಂದು ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದಿಂದ ಭಾನುವಾರ ಸೂರ್ಯಕಾಂತಿ ಬೆಂಬಲ ಬೆಲೆ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ರೈತರಿಗೆ ರಾಜ್ಯ ಸರ್ಕಾರ ₹5000 ಬೆಳೆ ಪರಿಹಾರ ಹಣ ಘೋಷಿಸಿದ್ದು, ಇನ್ನೆರಡು ದಿನಗಳಲ್ಲಿ ನೇರವಾಗಿ ರೈತರ ಖಾತೆಗೆ ಜಮಾ ಆಗಲಿದೆ.
ಕಾಂಗ್ರೆಸ್ ಸರ್ಕಾರ ರೈತರಿಗೆ ಸೂಕ್ತ ಬೆಲೆ ನೀಡಿ, ಅವರಿಗೆ ಬೀಜ ಗೊಬ್ಬರ ನೀಡಿ ರೈತರಿಗೆ ರೈತಪರ ಸರ್ಕಾರವಾಗಿದೆ ಎಂದರು.ರಾಜ್ಯದಲ್ಲಿ ರೈತರು ಬರದಿಂದಾಗಿ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಬೆಳೆಗೆ ಉತ್ತಮ ಬೆಲೆ ನೀಡಲು ಖರೀದಿ ಕೇಂದ್ರ ಆರಂಭಿಸಿದೆ. ಜಿಲ್ಲೆಯಲ್ಲಿ 10 ತಾಲೂಕನ್ನು ಬರಪೀಡಿತ ಎಂದು ಘೋಷಿಸಿದೆ. ಕೇಂದ್ರ ಬರ ವೀಕ್ಷಣೆ ತಂಡ, ಬರ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ಮಾಡಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸ್ದ್ದು, ಆದರೆ ಇದುವರೆಗೆ ಪರಿಹಾರ ಹಣ ನೀಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ಮೂಲಕ ಕೂಡಲೇ ಬೆಳೆ ಪರಿಹಾರ ನೀಡಬೇಕು ಒತ್ತಾಯಿಸಿದ್ದರು.
ಎಪಿಎಂಸಿ ಕಾರ್ಯದರ್ಶಿ ಆರ್.ಎಂ.ದಂಡಿನ ಮಾತನಾಡಿ, ಸೂರ್ಯಕಾಂತಿ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ಗೆ ₹8343 ಬೆಂಬಲವಾಗಿ ಒಬ್ಬ ರೈತರಿಂದ 20 ಕ್ವಿಂಟಾಲ್ ಖರೀದಿಸಲು ಅವಕಾಶವಿದ್ದು, ಈಗಾಗಲೇ 309 ರೈತರು ಮೊದಲು ಆನ್ ಲೈನ್ ಮೂಲಕ ಹೆಸರು ನೋಂದಾಯಿಸಿಕೊಂಡಿದ್ದಾರೆ. ತಾಲೂಕಿನ ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದರು.ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಧ್ಯಕ್ಷ ಜೈನಸಾಬ ಹಗೇದಾಳ, ಉಪಾಧ್ಯಕ್ಷ ದೊಡ್ಡಪ್ಪ ದಂಡಿನ, ನಿರ್ದೇಶಕರಾದ ಮಹಾಲಿಂಗಯ್ಯ ಹಿರೇಮಠ, ಬಸಪ್ಪ ಕತ್ತಿ, ಮಾಂತಮ್ಮ ಹೊಸೂರ, ಗಿರಿಜಾ ಹೊಸೂರ, ಶಾಂತಾ ಗೌಡಗೇರಿ, ಮುಖಂಡರಾದ ಶೇಖರಪ್ಪ ಬಾದವಾಡಗಿ, ಎ.ಕೆ. ಉಪನಾಳ, ಬಸವರಾಜ ಹೊಸಮನಿ, ಪ್ರಭು ಇದ್ದಲಗಿ, ಸಂಜೀವ ಜೋಷಿ , ಕಾರ್ಯದರ್ಶಿ ಮುತ್ತಣ್ಣ ಕುದರಿಮನಿ, ರಾಜು ಕರಂಡಿ ಉಪಸ್ಥಿತರಿದ್ದರು.
ದೇಶದಲ್ಲೇ ಅತ್ಯಂತ ಹೆಚ್ಚಿನ ಆದಾಯ ತೆರಿಗೆಯನ್ನು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ನೀಡುತ್ತಿದೆ. ಅದರೂ ಕೇಂದ್ರ ಸರ್ಕಾರ ರೈತ ಪರ, ಅಭಿವೃದ್ಧಿ ಪರ ಇಲ್ಲದಿರುವುದು ವಿಷಾದನೀಯ. ಕೂಡಲೇ ಕೇಂದ್ರದಿಂದ ಬರ ಪರಿಹಾರ ಹಣ ನೀಡಿ ರೈತರಿಗೆ ನ್ಯಾಯ ಒದಗಿಸಬೇಕು.- ವಿಜಯಾನಂದ ಕಾಶಪ್ಪನವರ ಜಿಲ್ಲಾ ಉಸ್ತುವಾರಿ ಸಚಿವರು