ಹಿಂದುಳಿದ ವರ್ಗಗಳ ಅಭ್ಯುದಯಕ್ಕೆ ಸರ್ಕಾರ ದಿಟ್ಟ ಕ್ರಮ: ಶಾಸಕ ಶರತ್ ಬಚ್ಚೇಗೌಡ

| Published : Oct 12 2023, 12:00 AM IST

ಹಿಂದುಳಿದ ವರ್ಗಗಳ ಅಭ್ಯುದಯಕ್ಕೆ ಸರ್ಕಾರ ದಿಟ್ಟ ಕ್ರಮ: ಶಾಸಕ ಶರತ್ ಬಚ್ಚೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಹಿಂದುಳಿದ ವರ್ಗದ ಸಮುದಾಯವನ್ನು ಮೇಲೆತ್ತುವ ದೃಷ್ಟಿಯಿಂದ ಸರ್ಕಾರ ದಿಟ್ಟ ಕ್ರಮವನ್ನು ಕೈಗೊಂಡಿದ್ದು ಅಗತ್ಯವಾದ ಎಲ್ಲಾ ಯೋಜನೆಗಳನ್ನು ಅನುಷ್ಠಾನ ಮಾಡುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು
ದೇವರಾಜ ಅರಸು ಮೆಟ್ರಿಕ್ ಬಾಲಕರ ವಿದ್ಯಾರ್ಥಿನಿಲಯ ಉದ್ಘಾಟನೆ ಕನ್ನಡಪ್ರಭ ವಾರ್ತೆ ಹೊಸಕೋಟೆ ರಾಜ್ಯದಲ್ಲಿ ಹಿಂದುಳಿದ ವರ್ಗದ ಸಮುದಾಯವನ್ನು ಮೇಲೆತ್ತುವ ದೃಷ್ಟಿಯಿಂದ ಸರ್ಕಾರ ದಿಟ್ಟ ಕ್ರಮವನ್ನು ಕೈಗೊಂಡಿದ್ದು ಅಗತ್ಯವಾದ ಎಲ್ಲಾ ಯೋಜನೆಗಳನ್ನು ಅನುಷ್ಠಾನ ಮಾಡುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ನಗರದ ನಿಸರ್ಗ ಬಡಾವಣೆಯಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಸರ್ಕಾರವು 1977ರಲ್ಲಿ ರಾಜ್ಯದಲ್ಲಿರುವ ಹಿಂದುಳಿ ಹಾಗೂ ಅಲ್ಪಸಂಖ್ಯಾತರ ಜನಾಂಗವನ್ನು ಗುರ್ತಿಸಿ ಅವರ ಕ್ಷೇಮಾಭಿವೃದ್ಧಿಗಾಗಿ ಪ್ರತ್ಯೇಕವಾದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಇಲಾಖೆಯನ್ನು ಪ್ರಾರಂಭಿಸಿ ಔದ್ಯೋಗಿಕವಾಗಿ ಮೀಸಲಾತಿ ಸೌಲಭ್ಯ ನೀಡಲು ಅವಕಾಶ ಕಲ್ಪಿಸಲಾಗಿತ್ತು. ನಗರದಲ್ಲಿ 125 ವಿದ್ಯಾರ್ಥಿಗಳು ವ್ಯಾಸಂಗ ಮಾಡುವಂತಹ ಬೃಹದಾಕಾರದ ವಸತಿ ನಿಲಯವನ್ನು ನಿರ್ಮಿಸಿ ಉದ್ಘಾಟನೆ ಮಾಡಲಾಗುತ್ತಿದೆ. ವಸತಿ ನಿಲಯದಲ್ಲಿ ಗುಣಮಟ್ಟದ ಆಹಾರವನ್ನು ಸರ್ಕಾರದ ನಿಯಮಾನುಸಾರ ಕಾಲಕಾಲಕ್ಕೆ ನೀಡಬೇಕು ಎಂದು ವಸತಿ ನಿಲಯ ಸಿಬ್ಬಂದಿಗೆ ಸೂಚಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ನಿರುಪಮ ಸಿ ಮೌಳಿ ಮಾತನಾಡಿ ಸುಮಾರು 3.80 ಕೋಟಿ ರು. ವೆಚ್ಚದಲ್ಲಿ ನೂತನ ವಿದ್ಯಾರ್ಥಿ ನಿಲಯವನ್ನು ನಿರ್ಮಿಸಲಾಗಿದ್ದು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಲಾಗಿದೆ ಎಂದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕು ಅಧಿಕಾರಿ ಪ್ರೀತಿ, ತಾಲೂಕು ವಿಸ್ತರಣಾಧಿಕಾರಿ ಸಿದ್ದೇಶ್, ಬಿಇಓ ಪದ್ಮನಾಭ್, ನಗರಸಭೆ ಸದಸ್ಯರ ಕೇಶವಮೂರ್ತಿ, ಗೌತಮ್, ಯುವ ಮುಖಂಡ ಭೈರೇಗೌಡ ಇದ್ದರು. ಹೊಸಕೋಟೆ ನಗರದ ನಿಸರ್ಗ ಬಡಾವಣೆಯಲ್ಲಿ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಶಾಸಕ ಶರತ್ ಬಚ್ಚೇಗೌಡ, ತಹಸೀಲ್ಧಾರ್ ವಿಜಯ್ ಕುಮಾರ್ ಉದ್ಘಾಟಿಸಿದರು.