ಸಾರಾಂಶ
ತಾಲೂಕಿನಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಬೆಳೆ ಕಳೆದುಕೊಂಡವರ ಹೊಲಗಳಿಗೆ ಅಧಿಕಾರಿಗಳು ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದ್ದು ವರದಿ ಆಧರಿಸಿ ಅರ್ಹ ರೈತರಿಗೆ ಪರಿಹಾರ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಹೇಳಿದರು.
ಕನ್ನಡಪ್ರಭ ವಾರ್ತೆ ಮಸ್ಕಿ
ತಾಲೂಕಿನಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಬೆಳೆ ಕಳೆದುಕೊಂಡವರ ಹೊಲಗಳಿಗೆ ಅಧಿಕಾರಿಗಳು ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದ್ದು ವರದಿ ಆಧರಿಸಿ ಅರ್ಹ ರೈತರಿಗೆ ಪರಿಹಾರ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಹೇಳಿದರು.ತಾಲ್ಲೂಕಿನ ಸಂತೆಕೆಲ್ಲೂರು ಹಾಗೂ ಗುಡದೂರು ಸಮೀಪದ ಗುರುವಾರ ಮಳೆಯಿಂದ ಹಾನಿಗೊಳಗಾದ ತೊಗರಿ ಸೇರಿದಂತೆ ಇತರೆ ಬೆಳೆಗಳನ್ನು ಪರಿಶೀ ಲಿಸಿದ ನಂತರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಕಂದಾಯ ಹಾಗೂ ಕೃಷಿ ಇಲಾಖೆಯಿಂದ ಈಗಾಗಲೇ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕೈಗೊಳ್ಳಲಾಗಿದೆ. ಸಮೀಕ್ಷೆ ವೇಳೆ ಅರ್ಹರನ್ನು ಕೈಬಿಡುವುದು, ಅರ್ನಹರನ್ನು ಸೇರಿಸುವುದು ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ, ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಾಪೂರ, ಎ. ವಸಂತಕುಮಾರ, ಡಿಸಿ ನಿತೀಶ ಕೆ., ಸಿಇಒ ಈಶ್ವರ ಕಾಂದೂ, ಎಸ್ಪಿ ಪುಟ್ಟಮಾದಯ್ಯ, ಎಸಿ ಬಸವಣ್ಣಪ್ಪ ಕಲ್ಲಶೆಟ್ಟಿ, ತಹಶೀಲ್ದಾರ್ ಮಂಜುನಾಥ ಬೋಗಾವತಿ, ತಾಪಂ ಇಒ ಅಮರೇಶ ಯಾದವ್, ಲಿಂಗಸುಗೂರು ಡಿಎಸ್‌ಪಿ ದತ್ತಾತ್ರೇಯ ಕಾರ್ನಡ್ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.