ಬಾಂಗ್ಲಾದಲ್ಲಿನ ಹಿಂದೂಗಳ ರಕ್ಷಣೆಗೆ ಮುಂದಾಗಲಿ

| Published : Aug 14 2024, 12:48 AM IST

ಸಾರಾಂಶ

ಬಾಂಗ್ಲಾ ದೇಶದಲ್ಲಿನ ಹಿಂದೂಗಳ ಹಿತ ಕಾಪಾಡುವಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಅವರ ರಕ್ಷಣೆ ಮಾಡಬೇಕು ಎಂದು ಹಿಂದು ಹಿತ ರಕ್ಷಣಾ ಸಮಿತಿಯ ಮುಖಂಡ ಅಮಿತ್ ವಿನಂತಿಸಿದರು. ಪಟ್ಟಣದ ಗಾಂಧಿವೃತ್ತದಲ್ಲಿ ತಾಲೂಕು ಹಿಂದು ಹಿತ ರಕ್ಷಣಾ ವೇದಿಕೆ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾತನಾಡಿ ಬಾಂಗ್ಲಾದಲ್ಲಿ ಹಿಂದೂಗಳನ್ನು ಹತ್ಯೆ ಮಾಡಲಾಗುತ್ತಿದ್ದು, ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿದೆ. ಇದನ್ನು ತಪ್ಪಿಸುವಲ್ಲಿ ಕೇಂದ್ರ ಸರ್ಕಾರ ಮತ್ತು ವಿಶ್ವ ಸಂಸ್ಥೇ ಮಧ್ಯೆಪ್ರವೇಶಿಸಬೇಕೆಂದು ಆಗ್ರಹಪಡಿಸಿದರು.

ಹೊಳೆನರಸೀಪುರ: ಬಾಂಗ್ಲಾ ದೇಶದಲ್ಲಿನ ಹಿಂದೂಗಳ ಹಿತ ಕಾಪಾಡುವಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಅವರ ರಕ್ಷಣೆ ಮಾಡಬೇಕು ಎಂದು ಹಿಂದು ಹಿತ ರಕ್ಷಣಾ ಸಮಿತಿಯ ಮುಖಂಡ ಅಮಿತ್ ವಿನಂತಿಸಿದರು. ಪಟ್ಟಣದ ಗಾಂಧಿವೃತ್ತದಲ್ಲಿ ತಾಲೂಕು ಹಿಂದು ಹಿತ ರಕ್ಷಣಾ ವೇದಿಕೆ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾತನಾಡಿ ಬಾಂಗ್ಲಾದಲ್ಲಿ ಹಿಂದೂಗಳನ್ನು ಹತ್ಯೆ ಮಾಡಲಾಗುತ್ತಿದ್ದು, ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿದೆ. ಇದನ್ನು ತಪ್ಪಿಸುವಲ್ಲಿ ಕೇಂದ್ರ ಸರ್ಕಾರ ಮತ್ತು ವಿಶ್ವ ಸಂಸ್ಥೇ ಮಧ್ಯೆಪ್ರವೇಶಿಸಬೇಕೆಂದು ಆಗ್ರಹಪಡಿಸಿ, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು. ತಾಲೂಕು ಹಿಂದು ಹಿತ ರಕ್ಷಣಾ ವೇದಿಕೆಯ ಮುಖಂಡ ಎನ್.ಪಟ್ಟಾಭೀ ಅವರು ಮಾತನಾಡಿದರು.ತಾಲೂಕು ಬಿಜೆಪಿ ಅಧ್ಯಕ್ಷ ಮಳಲಿ ನಾರಾಯಣ್ ಬಹಳಷ್ಟು ಹಿಂದುಗಳು ಭಾಗವಹಿಸಿ ಬಾಂಗ್ಲದೇಶದ ಕೃತ್ಯವನ್ನು ಖಂಡಿಸಿ ಘೋಷಣೆ ಕೂಗಿದರು.