ಸಾರಾಂಶ
ಕಲಾದಗಿ ಗ್ರಾಮದ ಸರ್ಕಾರಿ ಉರ್ದು ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದರ ಚಾವಣಿ ಕುಸಿದು ಬಿದ್ದಿದೆ. ಅದೃಷ್ಟವಶಾತ ಯಾವುದೇ ಅವಘಡ ಸಂಭವಿಸಿಲ್ಲ.
ಕನ್ನಡಪ್ರಭ ವಾರ್ತೆ ಕಲಾದಗಿ
ಗ್ರಾಮದ ಸರ್ಕಾರಿ ಉರ್ದು ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದರ ಚಾವಣಿ ಶುಕ್ರವಾರ ಬೆಳಗಿನ ಜಾವ ಕುಸಿದು ಬಿದ್ದಿದೆ. ಅದೃಷ್ಟವಶಾತ ಯಾವುದೇ ಅವಘಡ ಸಂಭವಿಸಿಲ್ಲ.ಸರ್ಕಾರಿ ಉರ್ದು ಶಾಲೆಯಲ್ಲಿ ಒಂದರಿಂದ ಏಳನೇ ತರಗತಿಯಲ್ಲಿ 80 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯ ಕಟ್ಟಡ ಬಹಳ ಹಳೆಯದಾಗಿರುವುದರಿಂದ ಮಳೆಗೆ ಶಾಲಾ ಚಾವಣಿ ಕುಸಿದು ಬಿದ್ದಿದೆ. ಶಾಲೆಯ 6 ಕೊಠಡಿಗಳು ಬೀಳುವ ಹಂತದಲ್ಲಿವೆ. ಕೇವಲ ಎರಡು ಕೊಠಡಿಗಳಲ್ಲಿ ಒಂದರಿಂದ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಲಾಗುತ್ತಿದೆ. ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳಲ್ಲಿ ಮಕ್ಕಳನ್ನು ಕೂಡಿಸಿದಂತೆ ಡಿಡಿಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆ ನೀಡಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ಸಮೂಹ ಸಂಪನ್ಮೂಲ ವ್ಯಕ್ತಿ ಐ.ಎಂ.ಮನಿಯಾರ ಭೇಟಿ ನೀಡಿ, ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳಲ್ಲಿ ಮಕ್ಕಳಿಗೆ ಕೂಡಿಸಿದಂತೆ ಶಾಲಾ ಮುಖ್ಯ ಶಿಕ್ಷಕಿ ಎಸ್.ಎನ್ ನಾಗಠಾಣ ಅವರಿಗೆ ಸೂಚಿಸಿದರು. ಪ್ರಸ್ತಕ ಸಾಲಿನ ಶೈಕ್ಷಣಿಕ ವರ್ಷದ ಎರಡನೇ ಅವಧಿ ಪ್ರಾರಂಭವಾಗಿದ್ದು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲಾ ಕಟ್ಟಡಗಳ ಸ್ಥಿತಿ ಗತಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.;Resize=(128,128))
;Resize=(128,128))
;Resize=(128,128))
;Resize=(128,128))