ಸಾರಾಂಶ
ಚಿಕ್ಕಮಗಳೂರು: ಪಂಚ ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಗೆ ಸಾವಿರಾರು ಕೋಟಿ ಕೊಡುತ್ತಿರುವ ರಾಜ್ಯ ಸರ್ಕಾರದ ಸಾಧನೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಜೋರಾಗಿ ತಿಳಿಸಿಕೊಡಬೇಕು. ಯಾವುದಾದರೂ ಮಾಡಬೇಕಾಗಿರುವ ಕೆಲಸ ಇದ್ದರೆ ಕಿವಿಯಲ್ಲಿ ಹೇಳಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಕರೆ ನೀಡಿದರು.

ಚಿಕ್ಕಮಗಳೂರಿನ ರೋಟರಿ ಸಭಾಂಗಣದಲ್ಲಿ ಶನಿವಾರ ನಡೆದ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯ ಕರ್ತರ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ಕರ್ನಾಟಕ ದೇಶಕ್ಕೆ ಮಾದರಿ ಎಂದರು.ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದರ ಜತೆಗೆ ರಾಜ್ಯದ ಅಭಿವೃದ್ಧಿಗೆ ಸರ್ಕಾರ ₹59,000 ಕೋಟಿ ನೀಡಿದೆ. ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೆ ತಲಾ ₹25 ಕೋಟಿ ಅನುದಾನ ನೀಡಲಾಗಿದೆ. ಈ ಎಲ್ಲಾ ಪ್ರಗತಿ ಯನ್ನು ಕಾರ್ಯಕರ್ತರು ಗಟ್ಟಿಯಾಗಿ ಹೇಳಬೇಕು. ಇದರಿಂದ ಮುಂದಿನ ಜಿಪಂ ಹಾಗೂ ತಾಪಂ ಚುನಾವಣೆಯಲ್ಲಿ ಗೆಲ್ಲಲು ಅನುಕೂಲವಾಗಲಿದೆ ಎಂದು ಹೇಳಿದರು.
ಭಾರತ ದೇಶದಲ್ಲಿ ಕಾಂಗ್ರೆಸ್ ಪಕ್ಷ ಶೇ. 45 ರಷ್ಟು ವೋಟ್‌ಗಳನ್ನು ಡಿಪಾಜಿಟ್ ಮಾಡಿಕೊಂಡಿದೆ ಎಂದರೆ ಇದಕ್ಕೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಜಾರಿಗೆ ತಂದ 20 ಅಂಶ ಕಾರ್ಯಕ್ರಮ. 2029ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಖಚಿತ. ಹಾಗೆಯೇ ರಾಹುಲ್‌ಗಾಂಧಿ ಪ್ರಧಾನಿಯಾಗುವುದು ಖಚಿತ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.5 ಕೆಸಿಕೆಎಂ 2