ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ. 13ರಂದು ಬೃಹತ್ ಸಾಧನಾ ಸಮಾವೇಶ ಆಯೋಜನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅಂದು ಹಕ್ಕುಪತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲಕನ್ನಡಪ್ರಭ ವಾರ್ತೆ ಹಾವೇರಿ
ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ. 13ರಂದು ಬೃಹತ್ ಸಾಧನಾ ಸಮಾವೇಶ ಆಯೋಜನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅಂದು ಹಕ್ಕುಪತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.ನಗರದಲ್ಲಿ ಸಮಾವೇಶ ಆಯೋಜನೆ ಕುರಿತು ಸ್ಥಳ ಪರಿಶೀಲಿಸಿ ಅವರು ಮಾತನಾಡಿದರು. ಜಿಲ್ಲೆಯೂ ಸೇರಿದಂತೆ ಹಲವು ಜಿಲ್ಲೆಗಳ ಫಲಾನುಭವಿಗಳಿಗೆ ಒಂದು ಲಕ್ಷಕ್ಕೂ ಅಧಿಕ ಕಂದಾಯ ಗ್ರಾಮ ಹಕ್ಕುಪತ್ರ ವಿತರಣೆ ಮಾಡಲಾಗುವುದು. ಪೋಡಿ ಮುಕ್ತ ಅಭಿಯಾನ ಸಹ ನಡೆದಿದ್ದು, ಇತರ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು. ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಕೊಟ್ಟ ಮಾತಿನಂತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಎಲ್ಲ ಗ್ಯಾರಂಟಿಗಳನ್ನು ಈಡೇರಿಸಿದೆ. ಹಕ್ಕುಪತ್ರ ವಿತರಣೆ ಮಾಡುವುದಾಗಿ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ವಿಜಯನಗರದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಮೊದಲ ಹಂತದಲ್ಲಿ ಹಕ್ಕುಪತ್ರ ವಿತರಣೆ ಮಾಡಲಾಗಿದೆ. ಹಾವೇರಿ ಸಮಾವೇಶದಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು.ಎಲ್ಲಿಯೂ ಸಮಸ್ಯೆಯಾಗದಂತೆ ಕಾರ್ಯಕ್ರಮ ಆಯೋಜನೆ ಮಾಡಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ವಾಹನಗಳ ನಿಲುಗಡೆ, ಗಣ್ಯರ ವಾಹನಗಳ ನಿಲುಗಡೆ, ಹೆಲಿಪ್ಯಾಡ್‌ಗಳ ನಿರ್ಮಾಣಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ಮುಖಂಡರು, ಸಚಿವ ಸಂಪುಟದ ಸಹೋದ್ಯೋಗಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.ವೇದಿಕೆ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ್, ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿದ ಮಾದರಿಯಲ್ಲೇ ಸಾಧನಾ ಸಮಾವೇಶದ ಸಿದ್ಧತೆ ಮಾಡಲಾಗುವುದು. ವಾಹನಗಳ ನಿಲುಗಡೆಗೆ ವೇದಿಕೆ ಸಮೀಪದಲ್ಲೇ ವ್ಯವಸ್ಥೆ ಮಾಡಲಾಗುವುದು. ವೈದ್ಯಕೀಯ ಕಾಲೇಜು ಆವರಣದಲ್ಲಿ ಹೆಲಿಪ್ಯಾಡ್ ನಿರ್ಮಿಸಿದರೆ ಸೂಕ್ತವಾಗಲಿದೆ ಎಂದು ಹೇಳಿದರು. ಎಎಸ್ಪಿ ಲಕ್ಷ್ಮಣ ಶಿರಕೋಳ, ಅವರು ವಾಹನ ನಿಲುಗಡೆ ಸ್ಥಳದ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣವರ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ, ಆನಂದ ಗಡ್ಡದ್ದೇವರಮಠ ಇತರರಿದ್ದರು.ಕೋಟ್...ಒಂದು ಲಕ್ಷಕೂ ಅಧಿಕ ಜನರಿಗೆ ಹಕ್ಕುಪತ್ರ ಸೇರಿದಂತೆ ಹಲವು ಯೋಜನೆಗಳ ಸವಲತ್ತುಗಳನ್ನು ವಿತರಣೆ ಮಾಡಲಿರುವ ಕಾರಣ ಹಾವೇರಿಯಲ್ಲಿ ನಡೆಯಲಿರುವ ಸಾಧನಾ ಸಮಾವೇಶ ಇತಿಹಾಸದಲ್ಲಿ ದಾಖಲಾಗಲಿದೆ. ಸರ್ಕಾರ ಕೊಟ್ಟ ಮಾತಿನಂತೆ ಜನರಿಗೆ ಸವಲತ್ತುಗಳನ್ನು ನೀಡುತ್ತಿದೆ. -ಶಿವಾನಂದ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ-------ಕೋಟ್...
ಜಿಲ್ಲಾ ಉಸ್ತುವಾರಿ ಸಚಿವರು ಸಮಾವೇಶದ ಸ್ಥಳ ಪರಿಶೀಲನೆ ನಡೆಸಿ ಹಲವು ಸಲಹೆ-ಸೂಚನೆ ನೀಡಿದ್ದಾರೆ. ಕಾರ್ಯಕ್ರಮವನ್ನು ಮಾದರಿ ಎನ್ನುವಂತೆ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗುವುದು.ಸಂಜೀವ ಕುಮಾರ ನೀರಲಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ18ಎಚ್‌ವಿಆರ್2ಹಾವೇರಿ ನಗದರಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಸಾಧನಾ ಸಮಾವೇಶದ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು. ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣವರ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ನೀರಲಗಿ ಇದ್ದರು.