- ಜಗಳೂರಲ್ಲಿ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಅರ್ಪಣೆ

- - -

ಜಗಳೂರು: ಟಾಟಾ ಪವರ್ ಕಂಪನಿಗೆ ವಿದ್ಯುತ್ ಖಾಸಗೀಕರಣ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರವನ್ನು ತಕ್ಷಣವೇ ಬದಲಾಯಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪುಟ್ಟಣ್ಣನಹಳ್ಳಿ ಮಂಜುನಾಥ ಬಣ) ಜಗಳೂರು ತಾಲೂಕು ಸಮಿತಿಯು ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ತಾಲೂಕು ಅಧ್ಯಕ್ಷ ಚಿಕ್ಕಮಲ್ಲನಹೊಳೆ ಚಿರಂಜೀವಿ ಮಾತನಾಡಿ, ರೈತರಿಗೆ ಸದ್ಯ ಸಿಗುತ್ತಿರುವ ಉಚಿತ ವಿದ್ಯುತ್ ಯೋಜನೆಗೆ ಸರ್ಕಾರದ ನಡೆಯಿಂದ ದೊಡ್ಡ ಹೊಡೆತ ಬೀಳಲಿದೆ. ''''ಗೃಹಜ್ಯೋತಿ'''' ಯೋಜನೆಯಡಿಯೂ ಅನ್ಯಾಯವಾಗಲಿದೆ. ವಿದ್ಯುತ್ ದರಗಳಲ್ಲಿ ನಿರಂತರ ಏರಿಕೆಯಾಗುವ ಆತಂಕವಿದೆ. ವಿದ್ಯುತ್ ಸಮಸ್ಯೆಯಿಂದ ಕೃಷಿ ಉತ್ಪಾದನೆ ಮತ್ತು ಹಾಲು ಉತ್ಪಾದನಾ ವೆಚ್ಚ ಹೆಚ್ಚಾಗಿ ತೀವ್ರ ನಷ್ಟ ಉಂಟಾಗಲಿದೆ ಎಂದರು.

ಖಾಸಗಿ ಕಂಪನಿಗಳಿಂದ ಗ್ರಾಮೀಣ ಭಾಗದ ವಿದ್ಯುತ್ ಸಂಪರ್ಕ ಹಾಗೂ ಸೇವೆಗಳು ನಿರ್ಲಕ್ಷ್ಯಕ್ಕೆ ಒಳಗಾಗಲಿವೆ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಕೂಡಲೇ ತಮ್ಮ ನಿರ್ಧಾರ ಬದಲಿಸಬೇಕು. ಈಗಿರುವ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನೇ ಮುಂದುವರಿಸಬೇಕು. ವಿದ್ಯುತ್ ಖಾಸಗೀಕರಣದಿಂದ ರೈತರು ಹಾಗೂ ಗ್ರಾಮೀಣ ಜನತೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಈ ನಿರ್ಧಾರ ಹಿಂಪಡೆಯದಿದ್ದರೆ, ರಾಜ್ಯಾದ್ಯಂತ ತೀವ್ರ ಸ್ವರೂಪದ ಬಂದ್ ಹಾಗೂ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದ ಪದಾಧಿಕಾರಿಗಳು ಎಚ್ಚರಿಸಿದ್ದಾರೆ.


ಮನವಿ ಸಲ್ಲಿಸುವ ವೇಳೆ ರಾಜ್ಯ ಕಾರ್ಯದರ್ಶಿಗಳಾದ ಕಾನನಕಟ್ಟೆ ತಿಪ್ಪೇಸ್ವಾಮಿ, ರೈತ ಸಂಘ ಪದಾಧಿಕಾರಿಗಳು, ಇತರರು ಇದ್ದರು.

- - -

-18ಜೆ.ಜಿಎ.ಲ್.1:

ಟಾಟಾ ಪವರ್ ಕಂಪನಿಗೆ ವಿದ್ಯುತ್ ನಿರ್ವಹಣೆ ವಹಿಸಲು ಮುಂದಾಗಿರುವ ಸರ್ಕಾರದ ನಿರ್ಧಾರ ಕೈ ಬಿಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆಯ ಪುಟ್ಟಣ್ಣನಹಳ್ಳಿ ಮಂಜುನಾಥ ಬಣದ ಜಗಳೂರು ತಾಲೂಕು ಸಮಿತಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.