ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ದುರ್ಬಳಕೆ ಖಂಡನೀಯ

| Published : Aug 05 2024, 12:36 AM IST

ಸಾರಾಂಶ

ಕೇಂದ್ರ ಸರ್ಕಾರ ಸಿಬಿಐ, ಐಟಿ, ಇಡಿ ಹಾಗೂ ರಾಜ್ಯಪಾಲರನ್ನು ಬಳಸಿಕೊಂಡು ತಮ್ಮ ವಿರುದ್ಧ ಮಾತನಾಡುವವರನ್ನು ತುಳಿಯಲು ಮಸಲತ್ತು ನಡೆಸುತ್ತದೆ.

ಹರಪನಹಳ್ಳಿ: ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸಿರುವ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಶೀಘ್ರ ಬೃಹತ್‌ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಹರಪನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ವಿ. ಅಂಜಿನಪ್ಪ ತಿಳಿಸಿದ್ದಾರೆ.ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನರಿಂದ ಆಯ್ಕೆಯಾದ ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನು ಕೆಡವಲು ಬಿಜೆಪಿಯವರು ಹೊರಟಿರುವುದು ಖಂಡನೀಯ ಎಂದು ಹೇಳಿದರು.

ಶೋಷಿತ ಸಮಾಜದ ಮುಖಂಡ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಸಾರಥ್ಯದಲ್ಲಿ 136 ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಬಂದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಜನರು ಸಹಿಸುವುದಿಲ್ಲ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಸಿಬಿಐ, ಐಟಿ, ಇಡಿ ಹಾಗೂ ರಾಜ್ಯಪಾಲರನ್ನು ಬಳಸಿಕೊಂಡು ತಮ್ಮ ವಿರುದ್ಧ ಮಾತನಾಡುವವರನ್ನು ತುಳಿಯಲು ಮಸಲತ್ತು ನಡೆಸುತ್ತದೆ ಎಂದು ತಿಳಿಸಿದರು.

ಬಿಜೆಪಿ ಕೈಗೊಂಡಿರುವ ಪಾದಯಾತ್ರೆಗೆ ಅರ್ಥವಿಲ್ಲ. ಕೇಂದ್ರ ಬಜೆಟ್‌ ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಬಿಜೆಪಿಯವರು ಚಕಾರ ಎತ್ತುತ್ತಿಲ್ಲ. ಬಿಜೆಪಿಯವರು ಪಾದಯಾತ್ರೆಯನ್ನು ದೆಹಲಿಗೆ ಕೈಗೊಳ್ಳಿ ಎಂದು ಸಲಹೆ ನೀಡಿದರು.

ಶಾಸಕರ ಜೊತೆ ಚರ್ಚಿಸಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಬೃಹತ್‌ ಹೋರಾಟ ಹಮ್ಮಿಕೊಳ್ಳುವುದಾಗಿ ಅವರು ತಿಳಿಸಿದರು.

ಚಿಗಟೇರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಕುಬೇರಗೌಡ ಮಾತನಾಡಿ ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ ಸಿದ್ದರಾಮಯ್ಯನವರ ವಿರುದ್ದ ಕೇಂದ್ರ ಸರ್ಕಾರ ಪಿತೂರಿ ಮಾಡುತ್ತಿದೆ ಇದು ಖಂಡನೀಯ ಎಂದು ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಬಂಡ್ರಿ ಗೋಣಿಬಸಪ್ಪ ಮಾತನಾಡಿ ಸಿದ್ದರಾಮಯ್ಯನವರು ಅಧಿಕಾರ ದುರುಪಯೋಗ ಪಡಿಸಿಕೊಂಡಿಲ್ಲ, ಕಾನೂನು ಪ್ರಕಾರವೇ ಮೂಡ ಸೈಟ್ ಗಳನ್ನು ತಮ್ಮ ಪತ್ತಿ ಹೆಸರಲ್ಲಿ ಪಡೆದಿದ್ದಾರೆ, ಆದರೆ ಬಿಜೆಪಿಯವರು ಸಿದ್ದರಾಮಯ್ಯನವರ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆ , ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರುವ ಹುನ್ನಾರ ನಡೆದಿದೆ ಹಾಗೇನಾದರೂ ಮಾಡಿದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿದರು.

ಪುರಸಭಾ ಹಿರಿಯ ಸದಸ್ಯ ಅಬ್ದುಲ್‌ ರಹಿಮಾನ್‌ ಮಾತನಾಡಿ ಸಿದ್ದರಾಮಯ್ಯನವರಿಗೆ ರಾಜ್ಯಪಾಲರು ನೋಟೀಸ್‌ ಕೊಟ್ಟಿರುವುದು ಖಂಡನೀಯ , ಬಹುಮತ ಹೊಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಅಭದ್ರ ಗೊಳಿಸುವ ಕ್ರಮ ಖಂಡನೀಯ ಎಂದು ಹೇಳಿದರು.

ಪುರಸಭಾ ಸದಸ್ಯ ಟಿ.ವೆಂಕಟೇಶ ಮಾತನಾಡಿ ಎಂದೂ ಬಹುಮತ ಪಡೆಯದ ಬಿಜೆಪಿಯವರು ಆಪರೇಷನ್‌ ಕಮಲದ ಮೂಲಕ ಅಧಿಕಾರಕ್ಕೆ ಬಂದು ಭ್ರಷ್ಟಾಚಾರ ನಡೆಸಿ ಇದೀಗ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಕಾರ್ಯ ಖಂಡನೀಯ ಎಂದರು.

ಪುರಸಭಾ ಸದಸ್ಯರುಗಳಾದ ಅಬ್ದುಲ್‌ ರಹಿಮಾನ್,ಟಿ.ವೆಂಕಟೇಶ, ಗೊಂಗಡಿ ನಾಗರಾಜ, ಉದ್ದಾರ ಗಣೇಶ, ಲಾಟಿದಾದಾಪೀರ, ಮುಖಂಡರಾದ ಬಂಡ್ರಿ ಗೋಣಿಬಸಪ್ಪ,ನೀಲಗುಂದ ವಾಗೀಶ, ಟಿ.ಎಚ್‌.ಎಂ.ಮಂಜುನಾಥ, ಎಂ.ಜಾವೇದ್, ಮೈದೂರು ರಾಮಣ್ಣ, ಹುಲ್ಲಿಕಟ್ಟಿ ಚಂದ್ರಪ್ಪ, ಛಲವಾದಿ ಪರಶುರಾಮ, ಕೆ.ಕಲ್ಲಹಳ್ಳಿ ಅರವಿಂದ, ಗುಡಿ ನಾಗರಾಜ, ಎಚ್‌.ವಸಂತಪ್ಪ, ಉಪ್ಪಾರ ವಕೀಲ ಮುಜಬರ್‌ ರಹಿಮಾನ್,ಹನುಮಂತಪ್ಪ, ಒ.ಮಹಾಂತೇಶ, ಸೋಮ್ಲನಾಯ್ಕ, ಚಿಕ್ಕೇರಿಬಸಪ್ಪ, ಮೈದೂರು ಎಚ್‌. ದೇವೇಂದ್ರಗೌಡ, ಎಲ್‌.ಮಂಜನಾಯ್ಕ, ಶಶಿಕುಮಾರನಾಯ್ಕ, ಇತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.