ಸಾರಾಂಶ
ಜ್ವರ ಹಾಗೂ ಬೆನ್ನು ನೋವಿನಿಂದ ಬಳಲುತ್ತಿರುವ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ಆರೋಗ್ಯ ವಿಚಾರಿಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಜ್ವರ ಹಾಗೂ ಬೆನ್ನು ನೋವಿನಿಂದ ಬಳಲುತ್ತಿರುವ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ಆರೋಗ್ಯ ವಿಚಾರಿಸಿದರು.ರಾಜ್ಯಪಾಲರು ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದರು. ತಮ್ಮ ತವರು ರಾಜ್ಯ ಮಧ್ಯಪ್ರದೇಶದಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರಿಂದ ಬೆನ್ನು ನೋವಿನ ಜೊತೆಗೆ ಲಘು ಜ್ವರದಿಂದ ಬಳಲುತ್ತಿದ್ದರು. ಈಗ ಅವರು ಸುಧಾರಿಸಿಕೊಳ್ಳುತ್ತಿದ್ದು, ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆಂದು ರಾಜಭವನದ ಮೂಲಗಳು ತಿಳಿಸಿವೆ.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))