ಸಾರಾಂಶ
ರೆಡ್‌ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಶತಮಾನೋತ್ಸವ ಕಟ್ಟಡವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.
ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕ ಶತಮಾನೋತ್ಸವ ಕಟ್ಟಡ ಉದ್ಘಾಟನೆಕನ್ನಡಪ್ರಭ ವಾರ್ತೆ ಮಂಗಳೂರು
ಭಾರತೀಯ ರೆಡ್‌ಕ್ರಾಸ್ ಸೊಸೈಟಿ ತನ್ನ ಸೇವೆಗಳ ವ್ಯಾಪ್ತಿಯನ್ನು ವಿಸ್ತರಿಸುವುದು ಮತ್ತು ಆಧುನಿಕ ಡಿಜಿಟಲ್ ಜಗತ್ತಿಗೆ ಅನುಗುಣವಾಗಿ ಡಿಜಿಟಲ್ ವೇದಿಕೆಗಳನ್ನು ಅಳವಡಿಸಿಕೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಲಹೆ ನೀಡಿದ್ದಾರೆ.ಮಂಗಳೂರಿನಲ್ಲಿ ಶನಿವಾರ ರೆಡ್‌ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಶತಮಾನೋತ್ಸವ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ರೆಡ್‌ಕ್ರಾಸ್ ಸೊಸೈಟಿಯು ಸಾಂಪ್ರದಾಯಿಕ ಪರಿಹಾರ ಕಾರ್ಯಗಳನ್ನು ಮೀರಿ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಬೇಕು. ಯುವ ರೆಡ್‌ಕ್ರಾಸ್ ಮತ್ತು ಜ್ಯೂನಿಯರ್ ರೆಡ್ ಕ್ರಾಸ್ ಘಟಕಗಳ ಮೂಲಕ ಹೆಚ್ಚಿನ ಸಂಖ್ಯೆಯ ಯುವ ಜನರನ್ನು ಒಳಗೊಳಿಸಬೇಕು ಎಂದರು.ರೆಡ್ ಕ್ರಾಸ್ ಅನ್ನು ಮಾನವೀಯತೆ ಮತ್ತು ನಿಸ್ವಾರ್ಥ ಸೇವೆಯ ಸಂಕೇತ ಎಂದು ಬಣ್ಣಿಸಿದ ರಾಜ್ಯಪಾಲರು, ರೆಡ್ ಕ್ರಾಸ್ ಸೊಸೈಟಿ ದಶಕಗಳಿಂದ ಈ ಆದರ್ಶಗಳನ್ನು ಎತ್ತಿಹಿಡಿದಿದೆ. ಅನಾರೋಗ್ಯ ಮತ್ತು ಬಿಕ್ಕಟ್ಟಿನ ಸಮಯದಲ್ಲಿ ರೆಡ್‌ಕ್ರಾಸ್ ಒಂದು ಶಕ್ತಿಯಾಗಿ ನಿಂತಿದೆ. ಇದರ ಇತಿಹಾಸವು ಕರುಣೆ, ಸೇವೆ ಮತ್ತು ಧೈರ್ಯಶಾಲಿ ಕರ್ತವ್ಯವೇ ಆಗಿದೆ. ಅಂತಾರಾಷ್ಟ್ರೀಯ ಸಂಸ್ಥೆಯಾಗಿ, 190 ಕ್ಕೂ ಹೆಚ್ಚು ದೇಶಗಳಲ್ಲಿ ಅಸ್ತಿತ್ವವನ್ನು ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ರೆಡ್ ಕ್ರಾಸ್ ಜನಮಾನಸದಲ್ಲಿ ಮಾನವೀಯ ಮೌಲ್ಯಗಳನ್ನು ಮೂಡಿಸುವ ಸಂಘಟನೆಯಾಗಿದೆ ಎಂದು ಹೇಳಿದರು.ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, ಸರ್ಕಾರವು ಎಲ್ಲರನ್ನೂ ನೇರವಾಗಿ ತಲುಪಲು ಸಾಧ್ಯವಾಗದಿದ್ದರೂ, ರೆಡ್‌ಕ್ರಾಸ್‌ನಂತಹ ಸಂಸ್ಥೆಗಳು ಈ ಅಂತರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ ಎಂದು ಎಂದರು.
ಇದೇ ಸಂದರ್ಭ ಸಮರ್ಪಣ ಎಂಬ ಡಿಜಿಟಲ್ ಸ್ಮರಣಿಕೆಯನ್ನು ಬಿಡುಗಡೆ ಮಾಡಲಾಯಿತು. ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ಐಆರ್‌ಸಿಎಸ್ ಕರ್ನಾಟಕ ಉಪಾಧ್ಯಕ್ಷ ಭಾಸ್ಕರ್ ರಾವ್, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ಡಾ.ಶಾಂತಾರಾಮ ಶೆಟ್ಟಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಶತಮಾನೋತ್ಸವ ಕಟ್ಟಡ ಸಮಿತಿ ಅಧ್ಯಕ್ಷ ಪುಷ್ಪರಾಜ್ ಜೈನ್, ಜಿಲ್ಲಾ ಘಟಕ ಉಪಾಧ್ಯಕ್ಷ ಡಾ.ಸತೀಶ್ ರಾವ್ ಸೇರಿದಂತೆ ಪದಾಧಿಕಾರಿಗಳು ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))