ಸಾರಾಂಶ
ಕುರುಬ ಸಮುದಾಯಕ್ಕೆ ಸೇರಿದ ರಾಜ್ಯದ ಮಾಜಿ ಸಚಿವ ಹಾಗೂ ಸಂಸದ ಸಿ.ಎಚ್. ವಿಜಯಶಂಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೇಘಾಲಯದ ರಾಜ್ಯಪಾಲರ ಹುದ್ದೆಗೆ ಶಿಫಾರಸು ಮಾಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜಯಶಂಕರ ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇದು ರಾಜ್ಯ ಕುರುಬ ಸಮುದಾಯಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೊಟ್ಟ ಕೊಡುಗೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೆ.ಪಿ. ಕುಬೇರಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಕುರುಬ ಸಮುದಾಯಕ್ಕೆ ಸೇರಿದ ರಾಜ್ಯದ ಮಾಜಿ ಸಚಿವ ಹಾಗೂ ಸಂಸದ ಸಿ.ಎಚ್. ವಿಜಯಶಂಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೇಘಾಲಯದ ರಾಜ್ಯಪಾಲರ ಹುದ್ದೆಗೆ ಶಿಫಾರಸು ಮಾಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜಯಶಂಕರ ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇದು ರಾಜ್ಯ ಕುರುಬ ಸಮುದಾಯಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೊಟ್ಟ ಕೊಡುಗೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೆ.ಪಿ. ಕುಬೇರಪ್ಪ ಹೇಳಿದರು.ಸೋಮವಾರ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪಟಾಕಿ ಸಿಡಿಸಿ, ಸಿಹಿ ವಿತರಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕುರುಬ ಸಮುದಾಯದ ನಾಯಕರೊಬ್ಬರು ಇದೇ ಮೊದಲ ಬಾರಿಗೆ ಈ ಉನ್ನತ ಹುದ್ದೆಗೆ ನೇಮಕವಾಗಿರುವುದು ಸಂತೋಷ ತಂದಿದೆ ಎಂದರು.
ಸಿ.ಎಚ್. ವಿಜಯಶಂಕರ್ ಶಾಸಕ, ಸಂಸದ, ವಿಧಾನಪರಿಷತ್ತು ಸದಸ್ಯ ಹಾಗೂ ರಾಜ್ಯ ಸಚಿವರಾಗಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಅಪಾರ ಅನುಭವವನ್ನು ಹೊಂದಿದ್ದಾರೆ. ಈ ಹುದ್ದೆಯನ್ನು ಅವರು ಸಮರ್ಥವಾಗಿ ನಿರ್ವಹಿಸಿ ರಾಜ್ಯ, ಪಕ್ಷಕ್ಕೆ ಹಾಗೂ ಸಮುದಾಯಕ್ಕೆ ಹೆಸರು ತರುವ ಕೆಲಸ ಮಾಡಲಿ ಎಂದು ಆಶಯ ವ್ಯಕ್ತಪಡಿಸಿದರು.ಈ ಸಂದರ್ಭ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರೂ ಕುರುಬ ಸಮಾಜದ ಮುಖಂಡರೂ ಆದ ದಿಡಗೂರು ಪಾಲಾಕ್ಷಪ್ಪ, ಎಸ್.ಎಸ್. ಬೀರಪ್ಪ, ಮಂಜುನಾಥ್ ಇಂಚರ, ಕೋಳಿ ಸತೀಶ್, ಗುಂಡ ಚಂದ್ರು, ಲೋಹಿತ್ ಮಾಸಡಿ, ತಿಪ್ಪೇಶ್ ಬೇಲಿಮಲ್ಲೂರು, ಜಿಪಂ ಮಾಜಿ ಸದಸ್ಯ ಸುರೇಂದ್ರ ನಾಯ್ಕ, ಮುಖಂಡ ಮಹೇಶ್ ಹುಡೇದ್, ಇತರರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.
- - - -29ಎಚ್.ಎಲ್.ಐ2: