ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ - ಪ್ರಜಾಪ್ರಭುತ್ವಕ್ಕೆ ಮಾರಕ: ಡಾ.ಪ್ರಭುಗೌಡ ಆಕ್ರೋಶ

| Published : Aug 19 2024, 12:53 AM IST / Updated: Aug 19 2024, 12:58 PM IST

ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ - ಪ್ರಜಾಪ್ರಭುತ್ವಕ್ಕೆ ಮಾರಕ: ಡಾ.ಪ್ರಭುಗೌಡ ಆಕ್ರೋಶ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಬಿಜೆಪಿ ರಾಜಕೀಯ ಪ್ರೇರಿತ ರಾಜ್ಯಪಾಲರ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಆಕ್ರೋಶ ವ್ಯಕ್ತಪಡಿಸಿದ್ದಾರೆ.

  ದೇವರಹಿಪ್ಪರಗಿ : ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಬಿಜೆಪಿ ರಾಜಕೀಯ ಪ್ರೇರಿತ ರಾಜ್ಯಪಾಲರ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸತತ ಎರಡು ಬಾರಿ ಸಿಎಂ ಆದ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಯುತ್ತದೆ. ಜನಪರವಾದ ಆಡಳಿತ ನೀಡುತ್ತ ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಸಿಎಂ ಅವರ ಜನಪ್ರಿಯತೆ ಕುಗ್ಗಿಸಲು ಹಾಗೂ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪಕ್ಷ ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿದ್ದಾರೆ. ಇತ್ತೀಚೆಗೆ ದೆಹಲಿಗೆ ರಾಜ್ಯಪಾಲರನ್ನು ಕರೆಸಿಕೊಂಡು ಅವರಿಗೆ ಸ್ಪಷ್ಟ ಸೂಚನೆ ನೀಡಿ ಕಳಿಸಿದ್ದು ರಾಜ್ಯದ ಜನತೆಗೆ ಗೊತ್ತಾಗಿದೆ. ಕಾಂಗ್ರೆಸ್ ಪಕ್ಷ ರಾಜ್ಯಪಾಲರ ಪಕ್ಷಪಾತ ಧೋರಣೆಯ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಿದೆ ಎಂದು ಗುಡುಗಿದ್ದಾರೆ.ಜನರ ಬೆಂಬಲ ಸರ್ಕಾರದ ಪರವಾಗಿದೆ. 

ರಾಜ್ಯಪಾಲರ ಮುದ್ದೆ ಹಿಂದಿನ ಸರ್ಕಾರದ ಹಲವಾರು ಮುಖಂಡರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಕೋರಿ ಸಲ್ಲಿಸಿರುವ ಅರ್ಜಿಗಳು ಬಾಕಿ ಇದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರ ವಿಚಾರದಲ್ಲಿ ತರಾತುರಿಯಿಂದ ಕ್ರಮ ಕೈಗೊಳ್ಳಲಾಗಿದೆ. ಇದು ರಾಜಕೀಯ ಪ್ರೇರಿತವಾಗಿದ್ದು. 

ಸಿಎಂ ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಕಾನೂನಿನ ಬಗ್ಗೆ ನಂಬಿಕೆ ಇದ್ದು, ಸತ್ಯ ಶೀಘ್ರ ಹೊರಬರಲಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲ ಸಂವಿಧಾನಿಕ ಹುದ್ದೆಗಳನ್ನು ಸರ್ವನಾಶ ಮಾಡುತ್ತಿದೆ. ಇಡಿ, ಐಟಿ, ಸಿಬಿಐ ಎಲ್ಲವನ್ನೂ ದುರುಪಯೋಗ ಮಾಡಿಕೊಂಡಿದೆ. ರಾಜ್ಯಪಾಲರ ಕಚೇರಿಯೂ ಈಗ ಬಿಜೆಪಿ ಕಚೇರಿ ಆಗಿದೆ ಎಂದು ಕಿಡಿಕಾರಿದ್ದಾರೆ.