ಬಿಜೆಪಿ ಕೈಗೊಂಬೆಯಂತಿದೆ ರಾಜ್ಯಪಾಲರ ವರ್ತನೆ

| Published : Aug 20 2024, 12:46 AM IST

ಸಾರಾಂಶ

ಕೊರಟಗೆರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕೊರಟಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ರಾಜ್ಯಪಾಲರು ಬಿಜೆಪಿ ಹೈಕಮಾಂಡ್ ಕೈಗೊಂಬೆಯಂತೆ ವರ್ತನೆ ಮಾಡುತ್ತಿದ್ದು, ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುವ ಮೂಲಕ ಭಾರತ ಅಖಂಡತೆಗೆ ಧಕ್ಕೆ ತರುತ್ತಿದ್ದಾರೆ. ಕೂಡಲೇ ರಾಷ್ಟ್ರಪತಿಗಳು ರಾಜ್ಯಪಾಲರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.ಸಿಎಂ ಸಿದ್ದರಾಮಯ್ಯ ಬಡವರ ಪರವಾಗಿ ಕೆಲಸ ಮಾಡುತ್ತಾರೆ. ಯಾವುದೇ ರೀತಿ ಹಗರಣ ಮಾಡಿಲ್ಲ. ಯಡಿಯೂರಪ್ಪ, ಕುಮಾರಸ್ವಾಮಿ, ಜಿ. ಟಿ. ದೇವೇಗೌಡ, ನಿಖಿಲ್ ಕುಮಾರಸ್ವಾಮಿ ಮುಡಾದಲ್ಲಿ ನಿವೇಶನ ಹೊಂದಿದ್ದಾರೆ. ಅವರನ್ನು ವಿಚಾರಣೆ ನಡೆಸಬೇಕು. ೨೦ ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿರುತ್ತದೆ. ಕಾನೂನು ರೀತಿಯಲ್ಲಿ ಪ್ರಾಷಿಕ್ಯೂಷನ್ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ವಾಲೆ ಚಂದ್ರಯ್ಯ, ಬಲರಾಮಯ್ಯ ಲಕ್ಷ್ಮಮ್ಮ, ಜಯಮ್ಮ, ನಾಗರಾಜ್ ಉಪಸ್ಥಿತರಿದ್ದರು.