ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ರಾಜಕೀಯ ದುರುದ್ದೇಶ, ಚಿತಾವಣೆಯಿಂದಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟೀಸ್ ನೀಡಿದ್ದಾರೆ. ಕಾನೂನಿನಲ್ಲಿ ಈ ನೋಟಿಸ್‌ಗೆ ಕವಡೆ ಕಾಸಿನ ಕಿಮ್ಮತ್ತು ಸಹ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ, ದಾವಣಗೆರೆ
ಪ್ರಧಾನಿ ನರೇಂದ್ರ ಮೋದಿ ರಾಜಕೀಯ ದುರುದ್ದೇಶ, ಚಿತಾವಣೆಯಿಂದಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟೀಸ್ ನೀಡಿದ್ದಾರೆ. ಕಾನೂನಿನಲ್ಲಿ ಈ ನೋಟಿಸ್‌ಗೆ ಕವಡೆ ಕಾಸಿನ ಕಿಮ್ಮತ್ತು ಸಹ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಹೇಳಿದ್ದಾರೆ.ರಾಜ್ಯಪಾಲರು ಸಂವಿಧಾನಬದ್ಧವಾಗಿ ನಡೆದುಕೊಳ್ಳಬೇಕು. ಮೋದಿ ಮತ್ತು ಬಿಜೆಪಿಯವರು ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಪಾಲಕ ಕಚೇರಿಯನ್ನೇ ದುರ್ಬಳಕೆ ಮಾಡಿ, ದೇಶದ ಅನೇಕ ರಾಜ್ಯಗಳಲ್ಲಿ ಸರ್ಕಾರಗಳನ್ನು ಅಸ್ಥಿರಗೊಳಿಸುವ, ಕಿರುಕುಳ ಕೊಡುವ ಕೆಟ್ಟ ಸಂಪ್ರದಾಯ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ರಾಜ್ಯಾದಲ್ಲಿ ಭಾರಿ ಪ್ರಚಾರ ಮಾಡಿದ್ದ ಮೋದಿಗೆ ಕನ್ನಡಿಗರು ಮನ್ನಣೆ ನೀಡಲಿಲ್ಲ. ಕಾಂಗ್ರೆಸ್ ಪಕ್ಷದ 136 ಶಾಸಕರನ್ನು ಗೆಲ್ಲಿಸಿದ್ದರಿಂದ ಅವಮಾನಿತರಾದ ಮೋದಿ ಈಗ ದ್ವೇಷ ರಾಜಕಾರಣಕ್ಕೆ ಮುಂದಾಗಿದ್ದಾರೆ. ಚುನಾವಣೆ ಕಾಲದಲ್ಲಿ ಮತ ಪಡೆಯಲು ಪದೇಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದ ಮೋದಿ ಅತಿವೃಷ್ಟಿಂದ ಸಾವು, ನೋವು ಸಂಭವಿಸಿದರೂ ಇತ್ತ ಕಡೆ ತಿರುಗಿಯೂ ನೋಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.ಮುಡಾ ನಿವೇಶನ ಹಗರಣ ಹಿಂದಿನ ಬಿಜೆಪಿ ಸಿಎಂ ಬಸವರಾಜ ಬೊಮ್ಮಾಯಿ ಅವದಿಯಲ್ಲಿ ಆಗಿತ್ತು. ರಾಜ್ಯಪಾಲರು ನೋಟಿಸ್ ನೀಡುವುದಾದರೆ ಬೊಮ್ಮಾಯಿಗೆ ನೀಡಲಿ. ಸಿದ್ದರಾಮಯ್ಯಗೆ ನೋಟಿಸ್ ನೀಡಿದ್ದು ಸಂವಿಧಾನ ವಿರೋಧಿ ಕ್ರಮವಾಗಿದೆ. ಬಿಜೆಪಿಯ ಕುತಂತ್ರದ ವಿರುದ್ಧ ರಾಜ್ಯದ ಸಚಿವರು, ಶಾಸಕರು, ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಲಿದೆ ಎಂದು ಡಿ.ಬಸವರಾಜ ತಿಳಿಸಿದ್ದಾರೆ.
- - - -5ಕೆಡಿವಿಜಿ5:ಡಿ.ಬಸವರಾಜ