ಸಾರಾಂಶ
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಕ್ರಮ ಖಂಡಿಸಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ದಿಡೀರ್ ಪ್ರತಿಭಟನೆ ನಡೆಸಿ ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದರು.ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಹಳೇ ಬಸ್ ನಿಲ್ದಾಣದ ಮೂಲಕ ಮೈಸೂರು-ಊಟಿ ಹೆದ್ದಾರಿಯ ಮಡಹಳ್ಳಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಂತರ ತಾಲೂಕು ಕಚೇರಿಗೆ ತೆರಳಿ ಧರಣಿ ನಡೆಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಪ್ರತಿಭಟನಾಕಾರರು ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತ ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಏಳಿಗೆ ಸಹಿಸದೆ ರಾಜ್ಯಪಾಲರ ಮೂಲಕ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಇದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು. ಕುರುಬ ಸಮಾಜದ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ಎಸ್‌ಆರ್‌ಎಸ್ ರಾಜು ಮಾತನಾಡಿ, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿ ಯೋಜನೆಗಳು ಮುಂದುವರಿದರೆ ಬಿಜೆಪಿಗೆ ಉಳಿಗಾಲವಿಲ್ಲ ಎಂದು ರಾಜ್ಯಪಾಲರ ಮೂಲಕ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿಸಿದ್ದಾರೆ ಇದನ್ನು ರಾಜ್ಯದ ಜನರು ಸಹಿಸುವುದಿಲ್ಲ ಎಂದರು.ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಬಿ.ರಾಜಶೇಖರ್, ಚಿಕ್ಕಾಟಿ ಗ್ರಾಪಂ ಮಾಜಿ ಅಧ್ಯಕ್ಷ ಜಿ.ಮಹೇಶ್, ಹಾಪ್ ಕಾಮ್ಸ್ ಮಾಜಿ ಅಧ್ಯಕ್ಷ ಪುತ್ತನಪುರ ಶಿವಣ್ಣ, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗುರುಪ್ರಸಾದ್, ಪುರಸಭೆ ಸದಸ್ಯರಾದ ಮಹಮದ್ ಇಲಿಯಾಸ್, ಕಣ್ಣಪ್ಪ, ಮಾಜಿ ಉಪಾಧ್ಯಕ್ಷ ರಂಗಸ್ವಾಮಿ, ಮಾಜಿ ಸದಸ್ಯ ನಾರಾಯಣಸ್ವಾಮಿ, ಬಡಪ್ಪನ ಸುರೇಶ್, ಗ್ರಾಪಂ ಸದಸ್ಯ ನರಸಿಂಹ, ಮುಖಂಡರಾದ ಜಿಕೆಎನ್ ವಿಶ್ವ, ಗುಂಡ್ಲುಪೇಟೆ ರಘು, ಅಲ್ತಾಪ್, ವೆಂಕಟೇಶ್ ನಾಯಕ್, ಮೋಹನ್ ದಾಸ್, ಅರುಣ್ ಚಿಟ್ಟೆ, ದೇವರಹಳ್ಳಿ ಪ್ರಕಾಶ್, ಕಬ್ಬಹಳ್ಳಿ ನಂಜುಂಡಸ್ವಾಮಿ ಸೇರಿದಂತೆ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.