ರಾಮನಗರ: ಕೇಂದ್ರ ಸರ್ಕಾರ ರಾಜ್ಯಪಾಲರನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ ಹೊರಹಾಕಿದ್ದಾರೆ.
ರಾಮನಗರ: ಕೇಂದ್ರ ಸರ್ಕಾರ ರಾಜ್ಯಪಾಲರನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ ಹೊರಹಾಕಿದ್ದಾರೆ.
ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಮೊಟಕು ವಿಚಾರವಾಗಿ ರಾಮನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನದಲ್ಲಿ ಕೇವಲ 5 ನಿಮಿಷ ಏನೋ ಓದಿ ಹೋಗಿದ್ದಾರೆ. ರಾಮನಗರದಲ್ಲಿ ಸಭೆ ಇದ್ದ ಕಾರಣ ನಾನು ಇಲ್ಲಿಗೆ ಬಂದಿದ್ದೇನೆ. ಸ್ವಾತಂತ್ರ‍್ಯ ಬಂದಾಗಲಿಂದಲೂ ಅಧಿಕಾರದಲ್ಲಿರೋ ಸರ್ಕಾರ ಸಿದ್ಧಪಡಿಸಿ ಕೊಡುವ ಭಾಷಣವನ್ನೇ ರಾಜ್ಯ ಪಾಲರು ಓದುವ ಸಂಪ್ರದಾಯ ಇದೆ. ಎಲ್ಲಾ ರಾಜ್ಯಗಳಲ್ಲೂ ಇದೇ ಸಂಪ್ರದಾಯ ಮುಂದುವರಿದಿದೆ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ಶಿಥಿಲಗೊಳಿಸುತ್ತಿದೆ. ರಾಜ್ಯಪಾಲರು ಕಾನೂನು ಚೌಕಟ್ಟಿನಲ್ಲಿ ಅವರ ಕೆಲಸ ಮಾಡಬೇಕು ಎಂದರು.ರಾಜ್ಯಪಾಲರು ಸ್ವತಂತ್ರವಾಗಿ ಕೆಲಸ ಮಾಡಲು ಬಿಜೆಪಿ ಬಿಡುತ್ತಿಲ್ಲ. ಕೇಂದ್ರಕ್ಕೆ ತಕ್ಕಂತೆ ರಾಜ್ಯ ಬಿಜೆಪಿಯೂ ತಾಳ ಹಾಕುತ್ತಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಬಿಜೆಪಿಯವರು ಸುಳ್ಳುಗಾರರು, ಅವರಿಗೆ ಕಾನೂನು, ಸಂವಿಧಾನದ ಅರಿವಿಲ್ಲ. ರಾಜ್ಯಪಾಲರು ಸಂವಿಧಾನಕ್ಕಿಂತ ದೊಡ್ಡವರಲ್ಲ. ಅವರು ಸಂವಿಧಾನದ ಚೌಕಟ್ಟಿನಲ್ಲೇ ಕೆಲಸ ಮಾಡಬೇಕು. ಸರ್ಕಾರದ ಭಾಷಣ ಓದದೇ ಹೋಗಿರೋದು ತಪ್ಪು. ಹಿಂದೆಯೂ ರಾಜ್ಯಪಾಲರ ವಿರುದ್ಧ ಬಿಜೆಪಿಯವರು ಘೋಷಣೆ ಕೂಗಿದ್ದರು. ಸ್ಪೀಕರ್ ವಿರುದ್ಧ ಘೋಷಣೆ ಕೂಗಿ ಪತ್ರ ಎಸೆದಿದ್ದರು. ಇಂತಹ ಬಿಜೆಪಿಯವರಿಂದ ನಾವು ನೀತಿ ಕಲಿಯಬೇಕಿಲ್ಲ ಎಂದು ಕಿಡಿಕಾರಿದರು.
ದಕ್ಷಿಣದ ರಾಜ್ಯದಲ್ಲಿ ಎಲ್ಲಾ ಕಡೆ ಇದೇ ರೀತಿ ಆಗುತ್ತಿದೆ. ಉಳಿದ ಕಡೆ ಕೇಂದ್ರ ಸರ್ಕಾರ ಏನು ಹೇಳಿದರೂ ಜೈ ಅಂತಾರೆ. ರಾಜ್ಯಪಾಲರು ಅವರಿಗಿಷ್ಟ ಇಲ್ಲ ಅಂದರೆ ಆ ಲೈನ್ ಬಿಟ್ಟು ಬೇರೆ ವಿಚಾರಗಳನ್ನು ಓದಬಹುದಿತ್ತು. ಆದರೆ, ಸಂಪೂರ್ಣ ಭಾಷಣ ಮೊಟಕು ಮಾಡಿರುವುದು ಸರಿಯಲ್ಲ. ಈ ಬಗ್ಗೆ ಮುಂದಿನ ಹೋರಾಟದ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕಾನೂನು ಸಚಿವರು ತೀರ್ಮಾನ ಮಾಡುತ್ತಾರೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.