ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಸೋಲು ಗೆಲುವು ಮುಖ್ಯವಾಗಿಸದೇ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಪ್ರತಿಭೆ ಅನಾವರಣಕ್ಕೆ ಮುಂದಾಗಬೇಕು ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷ ಗೋವಿಂದರಾಜು ತಿಳಿಸಿದರು.ತಾಲೂಕಿನ ದುಗ್ಗನಹಳ್ಳಿ ಜ್ಞಾನಪೀಠ ವಿದ್ಯಾಸಂಸ್ಥೆ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಬಂಡೂರು ಕ್ಷಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿ, ಪ್ರತಿಯೊಂದು ವಿದ್ಯಾರ್ಥಿಗಳಲ್ಲಿಯೂ ತನ್ನದೇ ಆದ ಪ್ರತಿಭೆ ಅಡಗಿರುತ್ತದೆ. ಪೋಷಕರು ಹಾಗೂ ಶಿಕ್ಷಕರು ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿದರೇ ಉತ್ತಮ ಸಾಧನೆಗೆ ಸಹಕಾರಿಯಾಗಲಿದೆ ಎಂದರು.
ಗ್ರಾಮೀಣ ಮತ್ತು ನಗರ ಪ್ರದೇಶದ ಮಕ್ಕಳಲ್ಲಿನ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿ ರೂಪುಗೊಳ್ಳುತ್ತಿದೆ. ಮಕ್ಕಳ ಭವಿಷ್ಯದ ಬೆಳವಣಿಗೆಗೆ ಇಂತಹ ಕಾರ್ಯಕ್ರಮಗಳು ಪೂರಕವಾಗಿದೆ ಎಂದರು.ಬಂಡೂರು ಕ್ಷಸ್ಟರ್ ಸಿಆರ್‌ಪಿ ರಮೇಶ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡು ನಿರೀಕ್ಷೆಗೂ ಮೀರಿ ಪ್ರತಿಭೆ ಅನಾವರಣಗೊಳಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ಮಕ್ಕಳು ಪಠ್ಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯಿಂದ ಭಾಗವಹಿಸಿ ಅಭಿನಯ, ಸಂಗೀತ, ನಾಟಕ, ಮಿಮಿಗ್ರಿ ಸೇರಿದಂತೆ ತಮ್ಮಲ್ಲಿನ ಪ್ರತಿಭೆ ಪ್ರದರ್ಶಿಸಲು ವೇದಿಕೆಯಾಗಿರುವ ಪ್ರತಿಭಾ ಕಾರಂಜಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.ನಿವೃತ್ತ ಶಿಕ್ಷಕರಾದ ಶಕುಂತಲಾ ಹಾಗೂ ಪುಟ್ಟಮಣಿ ಅವರನ್ನು ಅಭಿನಂದಿಸಲಾಯಿತು. ಸಾವಯವ ಆಹಾರ ಮತ್ತು ಮಕ್ಕಳ ವಿವಿಧ ಚಟುವಟಿಕೆಗಳ ಗಮನ ಸೆಳೆದ್ದವು. ಸಿಆರ್ ಪಿ ರವಿಕುಮಾರ್, ಇಸಿಒ ಯೋಗನಂದ, ಗ್ರಾಪಂ ಸದಸ್ಯರಾದ ಮಹೇಶ್, ಶಂಕರೇಗೌಡ, ಮಂಜು, ಅಭಿಲಾಷ್ ಗೌಡ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಚ್.ಎಂ.ರಾಜು, ಜ್ಞಾನಪೀಠ ವಿದ್ಯಾಸಂಸ್ಥೆ ಕಾರ್ಯದರ್ಶಿ ಸತೀಶ್, ಮುಖ್ಯಶಿಕ್ಷಕಿ ಎಚ್.ಪಿ ದಿವ್ಯಾ, ವಿವಿಧ ಶಾಲೆಗಳ ಮುಖ್ಯಶಿಕ್ಷಕರಾದ ಶಿವಕುಮಾರ್, ಸಿದ್ದೇಗೌಡ, ಕಾಳೇಗೌಡ, ಗೋಪಾಲಸ್ವಾಮಿ, ಶೈಲಜಾ, ಶಿವಶಂಕರ್, ಶಿವಮಣಿ, ಸತೀಶ್, ಪುಟ್ಟಸ್ವಾಮಿ, ಮಮತಾ ಹಾಗೂ ಸಹ ಶಿಕ್ಷಕ-ಶಿಕ್ಷಕಿಯರು ಇದ್ದರು.