ದೈವ ಆರಾಧನೆ ಪ್ರದರ್ಶನಕ್ಕೆ ಸರ್ಕಾರದ ಸುತ್ತೋಲೆ: ಖಂಡನೆ, ಪ್ರತಿಭಟನೆ

| Published : Mar 01 2025, 01:02 AM IST

ಸಾರಾಂಶ

ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ಮಡಿಕೇರಿ: ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ಸಂಘದ ಪ್ರಮುಖರು ಹಾಗೂ ದೈವ ಆರಾಧಕರು ಹಾಗೂ ದೈವ ನರ್ತಕರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘದ ಸ್ಥಾಪಕಾಧ್ಯಕ್ಷ ಪಿ.ಎಂ.ರವಿ ಮಾತನಾಡಿ, ದೈವ ಆರಾಧನೆಯು ಕರಾವಳಿ ಸೇರಿದಂತೆ ಕೊಡಗು ಜಿಲ್ಲೆಯಲ್ಲೂ ಅನೇಕ ವರ್ಷದಿಂದ ಬಹುಮುಖ್ಯ ನಂಬಿಕೆ ಮತ್ತು ಆರಾಧನೆ ಪದ್ಧತಿಯಾಗಿದೆ. ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿರುವ ಸರ್ಕಾರದ ಕ್ರಮ ಖಂಡನೀಯ. ಸರ್ಕಾರ ತಕ್ಷಣವೇ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಪ್ರಮುಖರಾದ ಹರೀಶ್ ಜಿ. ಆಚಾರ್ಯ, ಬಿ.ಎ.ಜನಾರ್ದನ, ದಿನೇಶ್, ರಮೇಶ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.