ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಜಿ ಎಚ್ ಶ್ರೀನಿವಾಸ್

| Published : Jul 12 2024, 01:39 AM IST

ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಜಿ ಎಚ್ ಶ್ರೀನಿವಾಸ್
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತರೀಕೆರೆ ತಾಲೂಕು ಘಟಕದಿಂದ ಮನವಿ

ಕನ್ನಡಪ್ರಭ ವಾರ್ತೆ, ತರೀಕೆರೆ

ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತರೀಕೆರೆ ತಾಲೂಕು ಘಟಕದಿಂದ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಗಳಾದ 7ನೇ ವೇತನ ಆಯೋಗದ ವರದಿ ಯಥಾವತ್ತು ಜಾರಿ, ಎನ್‌ಪಿಎಸ್ ನೌಕರರನ್ನು ಹಳೆ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವುದು ಹಾಗೂ ಈಗಾಗಲೇ ಘೋಷಣೆಯಾಗಿರುವ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಸಂಬಂಧ ಮುಖ್ಯಮಂತ್ರಿಯವರ ಜೊತೆ ಚರ್ಚಿಸಲು ಶಾಸಕರಿಗೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಈ ಸಂಬಂಧ ದಿನವೇ ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವ ಜೊತೆಗೆ ಮಾತನಾಡುವುದಾಗಿ ಭರವಸೆ ನೀಡಿದರು.ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್ . ನಾಗರಾಜಪ್ಪ ಮಾತನಾಡಿ ನೌಕರರ ಹಿತ ದೃಷ್ಟಿಯಿಂದ ಮೂರು ಪ್ರಮುಖ ಬೇಡಿಕೆಗಳನ್ನು ಶೀಘ್ರವೇ ಜಾರಿಗೆ ತರುವಂತೆ ಮನವಿ ಮಾಡಿದರು.

ತಾಲೂಕು ದಂಡಾಧಿಕಾರಿಗಳಿಗೆ ಸರ್ಕಾರಿ ನೌಕರರ ಮೂರು ಪ್ರಮುಖ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಪತ್ರ ಬರೆಯಲು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಸಿ. ಟಿ ಯೋಗೀಶ್ ನಿರ್ದೇಶಕ ಎಂ. ಬಿ ರಾಮಚಂದ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ. ವಿ ರವಿ ಉಪಾಧ್ಯಕ್ಷೆ ಶಾಂತಮ್ಮ, ಸಹ ಕಾರ್ಯದರ್ಶಿ ಕುಮಾರಸ್ವಾಮಿ ನಿರ್ದೇಶಕ ಅನಂತಪ್ಪ ಹಾಗೂ ವಿವಿಧ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು

ಹಾಜರಿದ್ದರು.11ಕೆಟಿಆರ್.ಕೆ.1ಃ

ತರೀಕೆರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಘಟಕ ತರೀಕೆರೆಯಿಂದ ಶಾಸಕ ಜಿ.ಎಚ್. ಶ್ರೀನಿವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.