ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸರ್ಕಾರ ಬದ್ಧ

| Published : Dec 15 2023, 01:30 AM IST

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸರ್ಕಾರ ಬದ್ಧ
Share this Article
  • FB
  • TW
  • Linkdin
  • Email

ಸಾರಾಂಶ

ಸಚಿವರು ಮತ್ತು ಶಾಸಕರು ಕಸ್ತೂರಿ ರಂಗನ್‌ ವರದಿ ಅನುಷ್ಠಾನದಿಂದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಜನಸಾಮಾನ್ಯರ ನೈಜ ಜೀವನಕ್ಕೆ ಉಂಟಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿದರು.

ಶಿರಸಿ:

ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯಸರ್ಕಾರದ ಆಕ್ಷೇಪವಿದೆ. ಜನಸಾಮಾನ್ಯರ ಜೀವನಕ್ಕೆ ಮಾರಕವಾಗುವ ವರದಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಸತೀಶ್ ಶೈಲ್ ಮತ್ತು ಭೀಮಣ್ಣ ನಾಯ್ಕ ಅವರ ನೇತೃತ್ವದಲ್ಲಿ ಹೋರಾಟಗಾರರ ವೇದಿಕೆ ಅಧ್ಯಕ್ಷ ರವಿಂದ್ರ ನಾಯ್ಕ ಮತ್ತು ಪ್ರಧಾನ ಸಂಚಾಲಕ ಜಿ.ಎಂ. ಶೆಟ್ಟಿ ಅವರ ನಿಯೋಗವು ಭೇಟಿಯಾದ ವೇಳೆ ಮೇಲಿನಂತೆ ಸರ್ಕಾರದ ನಿಲುವು ಪ್ರಕಟಿಸಿದರು.ಚರ್ಚೆಯ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಚಿವರು ಮತ್ತು ಶಾಸಕರು ವರದಿ ಅನುಷ್ಠಾನದಿಂದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಜನಸಾಮಾನ್ಯರ ನೈಜ ಜೀವನಕ್ಕೆ ಉಂಟಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿದರು. ಅಲ್ಲದೇ, ಜಿಲ್ಲೆಯಲ್ಲಿನ ಅರಣ್ಯ ಪ್ರದೇಶದ ಮೇಲೆ ಅವಲಂಬಿತವಾಗಿರುವ ೮೫,೦೦೦ ಕುಟುಂಬಗಳ ಭೂಮಿ ಹಕ್ಕಿಗೆ ಸಮಸ್ಯೆ ಉಂಟಾಗುತ್ತದೆ ಎಂದು ವಿವರಿಸಿದರು.ಕಸ್ತೂರಿ ರಂಗನ್ ವರದಿಯ ಸಮಸ್ಯೆಯನ್ನು ಸರ್ಕಾರಕ್ಕೆ ಮನದಟ್ಟು ಮಾಡುವಲ್ಲಿ ಸ್ಪಂದಿಸಿದ ಸಚಿವರು, ಶಾಸಕರಿಗೆ ಜಿ.ಎಂ. ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.

ಜನವಸತಿ ಪ್ರದೇಶ ನಿರ್ಬಂಧ ಅವೈಜ್ಞಾನಿಕ:ಈಗಾಗಲೇ ವಾಸ್ತವ್ಯ ಮತ್ತು ಸಾಗುವಳಿ ಮಾಡುತ್ತಿರುವ ಕಂದಾಯ ಮತ್ತು ಅರಣ್ಯ ಪ್ರದೇಶದಲ್ಲಿನ ಜನ ವಸತಿ ಪ್ರದೇಶದಿಂದ ವರದಿಯ ಸೂಕ್ಷ್ಮ ಪ್ರದೇಶದ ವ್ಯಾಪ್ತಿ ಮುಕ್ತಗೊಳಿಸಲು ಕ್ರಮ ಜರುಗಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರಿಗೆ ಸ್ಥಳದಲ್ಲಿ ನಿರ್ದೇಶನ ನೀಡಿದರು ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.