ಸಾರಾಂಶ
ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ತರುವುದು ಕೇಂದ್ರ ಸರ್ಕಾರ ಮುಂದೆ ಇದೆ. ಸಮಿತಿ ಈ ಕಾರ್ಯ ಮಾಡಲಿದೆ. ವಕ್ಫ್ ಮುಖಾಂತರ ರಾಜ್ಯ ಸರ್ಕಾರ ಜನರಿಗೆ ಯಾವ ರೀತಿ ಮೋಸ ಮಾಡುತ್ತಿದ್ದಾರೆ. ಅದನ್ನು ಸರಿಪಡಿಸುವ ಒಂದು ಅವಕಾಶವಿದೆ.
ಹುಬ್ಬಳ್ಳಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ವಕ್ಫ್ ಬೋರ್ಡ್ ಮೂಲಕ ಜನರ ಆಸ್ತಿ ಕಬಳಿಕೆಗೆ ಕುಮ್ಮಕ್ಕು ನೀಡುತ್ತಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸರ್ಕಾರದ ವಿರುದ್ಧ ಹರಿಹಾಯ್ದರು.ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಹಾಗೂ ಸಾಮಾನ್ಯ ಜನರಿಗೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಬಿಜೆಪಿ ಹಿರಿಯ ನಾಯಕ ಬಸವನಗೌಡ ಪಾಟೀಲ ಯತ್ನಾಳ ಅವರ ಹೋರಾಟದ ಫಲವಾಗಿ ಕೇಂದ್ರ ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆಯ ಸಂಸದೀಯ ಜಂಟಿ ಸಮಿತಿ ಅಧ್ಯಕ್ಷರು ಬಂದು ಜನರ ಅಹವಾಲು ಸ್ವೀಕರಿಸುತ್ತಿದ್ದಾರೆ. ಅವರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಯತ್ನಾಳ ಅವರ ಹೋರಾಟದಿಂದ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯ ಸಿಗಲಿದೆ ಎಂದು ಹೇಳಿದರು.
ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ತರುವುದು ಕೇಂದ್ರ ಸರ್ಕಾರ ಮುಂದೆ ಇದೆ. ಸಮಿತಿ ಈ ಕಾರ್ಯ ಮಾಡಲಿದೆ. ವಕ್ಫ್ ಮುಖಾಂತರ ರಾಜ್ಯ ಸರ್ಕಾರ ಜನರಿಗೆ ಯಾವ ರೀತಿ ಮೋಸ ಮಾಡುತ್ತಿದ್ದಾರೆ. ಅದನ್ನು ಸರಿಪಡಿಸುವ ಒಂದು ಅವಕಾಶವಿದೆ. ಮುಂದೆ ವಕ್ಫ್ ತಿದ್ದುಪಡ ಕಾಯ್ದೆ ಬಂದಾಗ ಅನ್ಯಾಯಕ್ಕೊಳಗಾದ ಜನರಿಗೆ ನ್ಯಾಯ ದೊರೆಕಿಸಿಕೊಡಲು ಅವಕಾಶವಿದೆ ಎಂದರು.ಮುಡಾ ಪ್ರಕರಣ ಸಂಬಂಧಿಸಿ ಲೋಕಾಯುಕ್ತ ವಿಚಾರಣೆ ಎದುರಿಸುತ್ತಿರುವ ಮುಖ್ಯಮಂತ್ರಿಗಳ ಬಗ್ಗೆ ನಾನು ಮಾತನಾಡಲ್ಲ. ಕಳೆದ ನಾಲ್ಕೈದು ತಿಂಗಳಿನಿಂದ ರಾಜ್ಯದಲ್ಲಿ ಈ ವಿಷಯ ಚರ್ಚೆ ನಡೆಯುತ್ತಿದೆ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಬೇಕು ಎಂದರು.