ಸರ್ಕಾರಿ ನೌಕರರು ಆಸ್ತಿ ವಿವರ ಘೋಷಿಸಲಿ

| Published : Jan 18 2025, 12:46 AM IST

ಸಾರಾಂಶ

ಚಳ್ಳಕೆರೆ ನಗರ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾರ್ಯನಿರ್ವಾಹಕ ಸದಸ್ಯ ನಗರಂಗೆರೆ ಸಿ.ಮಹೇಶ್ ಮಾತನಾಡಿದರು.

ಚಳ್ಳಕೆರಯಲ್ಲಿ ಕರ್ನಾಟಕ ರಾಷ್ಟ್ರಸಮಿತಿ ಪಕ್ಷ ಆಗ್ರಹಕನ್ನಡಪ್ರಭ ವಾರ್ತೆ ಚಳ್ಳಕೆರೆ:

ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ಅಧಿಕಾರಿ, ನೌಕರರ ವರ್ಗ, ಲೋಕಾಯುಕ್ತ, ಉಪಲೋಕಾಯುಕ್ತರೂ ಸೇರಿದಂತೆ ತಮ್ಮ ಆಸ್ತಿ ವಿವರಗಳನ್ನು ಘೋಷಿಸಿಕೊಳ್ಳಬೇಕೆಂದು ಕರ್ನಾಟಕ ರಾಷ್ಟ್ರಸಮಿತಿ ಪಕ್ಷ ಆಗ್ರಹಿಸಿದೆ.

ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ಕಾರ್ಯನಿರ್ವಾಹಕ ಸದಸ್ಯ ನಗರಂಗೆರೆ ಸಿ.ಮಹೇಶ್ ಈ ಕುರಿತು ಮಾತನಾಡಿ, ಸರ್ಕಾರಿ ಸೇವೆಯಲ್ಲಿ ನಿರತರಾದವರು ಸಾರ್ವಜನಿಕರ ಹಿತದೃಷ್ಠಿಯಿಂದ ತಮ್ಮ ಆಸ್ತಿಗಳನ್ನು ಘೋಷಿಸಿಕೊಳ್ಳಬೇಕೆಂಬುವುದು ನಿಯಮವಿದೆ. ಆದರೆ, ಬಹುತೇಕ ಸರ್ಕಾರಿ ನೌಕರರು ಇದನ್ನು ನಿರ್ಲಕ್ಷಿಸುತ್ತಾ ಬಂದಿದ್ದಾರೆ. ಆದ್ದರಿಂದ ಸರ್ಕಾರಿ ನೌಕರರು ಈ ಕೂಡಲೇ ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಳ್ಳುವ ಮೂಲಕ ಎಲ್ಲರಿಗೂ ಮಾದರಿಯಾಗಬೇಕು ಎಂದು ತಿಳಿಸಿದರು.

ಈ ವೇಳೆ ಜಿಲ್ಲಾಧ್ಯಕ್ಷ ಕೆ.ಟಿ.ನಾಗರೆಡ್ಡಿ, ಪ್ರಧಾನ ಕಾರ್ಯದರ್ಶಿ ಮಣಿಮಠ, ಜಿಲ್ಲಾ ಯುವಘಟಕದ ಕಾರ್ಯದರ್ಶಿ ಜಬೀವುಲ್ಲಾ, ತಾಲ್ಲೂಕು ಕಾರ್ಯದರ್ಶಿ ಪಾಪಯ್ಯ ಮುಂತಾದವರು ಇದ್ದರು.