ಸರ್ಕಾರ ಅರಣ್ಯವಾಸಿಗಳಿಗೆ ನ್ಯಾಯ ಕೊಡಲಿ: ದೇವರಾಜ ಗೊಂಡ

| Published : Nov 20 2024, 12:32 AM IST

ಸರ್ಕಾರ ಅರಣ್ಯವಾಸಿಗಳಿಗೆ ನ್ಯಾಯ ಕೊಡಲಿ: ದೇವರಾಜ ಗೊಂಡ
Share this Article
  • FB
  • TW
  • Linkdin
  • Email

ಸಾರಾಂಶ

ಕಸ್ತೂರಿರಂಗನ್ ವರದಿ ಜಾರಿಯಾದರೆ ಅರಣ್ಯವಾಸಿಗಳ ಮೇಲೆ ಪರಿಣಾಮ ಆಗಲಿದೆ. ಕೇಂದ್ರ ಸರ್ಕಾರ ಅರಣ್ಯವಾಸಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕರಡು ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಬೇಕು.

ಭಟ್ಕಳ: ಕೇಂದ್ರ ಸರ್ಕಾರ ಕರಡು ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಆಗ್ರಹಿಸಿ ಮತ್ತು ಅರಣ್ಯವಾಸಿಗಳ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ನ. 21ರಂದು ಹಮ್ಮಿಕೊಂಡಿರುವ ರಾಜ್ಯಮಟ್ಟದ ಅರಣ್ಯವಾಸಿಗಳ ಬೆಂಗಳೂರು ಚಲೋದಲ್ಲಿ ಭಟ್ಕಳ ಸೇರಿದಂತೆ ಜಿಲ್ಲೆಯ ಹೆಚ್ಚಿನ ಸಂಖ್ಯೆಯಲ್ಲಿ ಅರಣ್ಯವಾಸಿಗಳು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಅರಣ್ಯಭೂಮಿ ಹಕ್ಕು ಹೋರಾಟಗಾರರ ಜಿಲ್ಲಾ ಸಂಚಾಲಕ ದೇವರಾಜ ಗೊಂಡ ತಿಳಿಸಿದರು.

ತಾಲೂಕಿನಲ್ಲಿ ಅರಣ್ಯವಾಸಿಗಳಿಗೆ ಬೆಂಗಳೂರು ಚಲೋ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡುವ ಸಭೆಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಕರಡು ಕಸ್ತೂರಿರಂಗನ್ ವರದಿಯನ್ನು ತಿರಸ್ಕರಿಸುವ ನಿರ್ಣಯ ಮಾಡಿರುವುದು ಸ್ವಾಗತಾರ್ಹ. ಕಸ್ತೂರಿರಂಗನ್ ವರದಿ ಜಾರಿಯಾದರೆ ಅರಣ್ಯವಾಸಿಗಳ ಮೇಲೆ ಪರಿಣಾಮ ಆಗಲಿದೆ. ಕೇಂದ್ರ ಸರ್ಕಾರ ಅರಣ್ಯವಾಸಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕರಡು ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಬೇಕು.

ಜಾರಿ ಮಾಡಲು ಉದ್ದೇಶಿಸಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮತ್ತು ಅರಣ್ಯವಾಸಿಗಳು ಅನುಭವಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಗಮನ ಸೆಳೆಯಲು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನ. 21ರಂದು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈಗಾಗಲೇ ಈ ಬಗ್ಗೆ ಅರಣ್ಯವಾಸಿಗಳಲ್ಲಿ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಅರಣ್ಯವಾಸಿಗಳಿಂದ ಉತ್ತಮ ಸ್ಪಂದನೆ ದೊರೆತಿದೆ. ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ಭಟ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಿಂದ 2 ಸಾವಿರಕ್ಕೂ ಅಧಿಕ ಅರಣ್ಯವಾಸಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದ ಅವರುಅರಣ್ಯವಾಸಿಗಳು ಬಹಳ ವರ್ಷಗಳಿಂದ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಅರಣ್ಯವಾಸಿಗಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಯಲ್ಲಾಪುರ: ಇಲ್ಲಿನ ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಇರುವುದರಿಂದ ನ. ೨೦ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.ಬುಧವಾರ ಬೆಳಗ್ಗೆ ೧೦ರಿಂದ ಸಂಜೆ ೬ ಗಂಟೆಯವರೆಗೆ ಯಲ್ಲಾಪುರ(ಪಟ್ಟಣ), ಇಡಗುಂದಿ, ವಜ್ರಳ್ಳಿ, ಬಿಸಗೋಡು, ಆನಗೋಡು, ದೇಹಳ್ಳಿ, ಮಾಗೋಡ, ಉಪಳೇಶ್ವರ(ಚಂದಗುಳಿ) ಹಾಗೂ ಕಣ್ಣೀಗೇರಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ವಿನಂತಿಸಿದ್ದಾರೆ.