ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಿದ್ದ 62ನೇ ವರ್ಷದ ಶ್ರೀ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಮೆರವಣಿಗೆಯು ಬುಧವಾರ ಸಂಜೆ ಅದ್ಧೂರಿಯಾಗಿ ನೆರವೇರಿತು.
ಸುಂಟಿಕೊಪ್ಪ: ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಿದ್ದ 62ನೇ ವರ್ಷದ ಶ್ರೀ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಮೆರವಣಿಗೆಯು ಬುಧವಾರ ಸಂಜೆ ಅದ್ಧೂರಿಯಾಗಿ ನೆರವೇರಿತು.
ಬೆಳಗ್ಗೆಯಿಂದ ಗಣಹೋಮ, ಹೂವಿನ ಪೂಜೆಯ ಜೊತೆಯಲ್ಲಿ ಸುತ್ತ ಮುತ್ತಲಿನ ನೂರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ಕೊನೆಯ ಪೂಜೆ ಸಲ್ಲಿಸಿ ಪುನೀತರಾದರು. ನಂತರ ಮಧ್ಯಾಹ್ನ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ನಂತರ ದೇವಾಲಯದಲ್ಲಿ ಪ್ರಧಾನ ಅರ್ಚಕ ಹಾ.ಮಾ.ಗಣೇಶ್ ಶರ್ಮಾ, ಮಂಜುನಾಥ್ ಶರ್ಮಾ, ಅವರ ನೇತೃತ್ವದಲ್ಲಿ ವಿಶೇಷ ಪೂಜೆ, ಮಹಾಪೂಜೆ ಹಾಗೂ ದೇವಾಲಯದಲ್ಲಿ ಗೌರಿ ಗಣೇಶನ ಉತ್ಸವ ಮೂರ್ತಿಗೆ ಕೊನೆಯ ಮಹಾ ಆರತಿಯನ್ನು ಮಾಡುವುದರ ಮೂಲಕ ಜೈ ಘೋಷಣೆಯೊಂದಿಗೆ ವಿದ್ಯುತ್ ದೀಪ ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ನಾದಸ್ವರ ಮತ್ತು ಡಿಜೆ ಸಂಗೀತ ಯುವಕ ಯುವತಿಯರು ಹೆಜ್ಜೆ ಹಾಕುತ್ತಾ ಬೃಹತ್ ಶೋಭಾಯಾತ್ರೆಯು ಸಾಗಿತು.
ಸಮಿತಿಯ ಪದಾಧಿಕಾರಿಗಳು ಅದ್ದೂರಿಯಾಗಿ 10 ದಿನಗಳ ಕಾಲ ಕುಳ್ಳಿರಿಸಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಪೂಜೆ ಹವನಗಳನ್ನು ಮಾಡಿ ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡರು.ರಾಮ ಮಂದಿರದಿಂದ ಆರಂಭಗೊಂಡ ಮೆರವಣಿಗೆ ಮಾದಾಪುರ ರಸ್ತೆಯಲ್ಲಿಯಲ್ಲಿರುವ ವೃಕ್ಷೋದ್ಭವ ಮಹಾಗಣಪತಿ ದೇವಾಲಯದತ್ತ ತೆರಳಿ ಅಲ್ಲಿ ಪೂಜೆ ಸಲ್ಲಿಸಿ ನಂತರ ಅದೇ ಮಾರ್ಗವಾಗಿ ಹಿಂತಿರುಗಿ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಾಗಿ ರಾತ್ರಿ ಗದ್ದೆಹಳ್ಳದ ಯಂಕನ ಉಲ್ಲಾಸ್ ಮತ್ತು ಯಂಕನ ಕರುಂಬಯ್ಯ ಅವರ ಕೆರೆಯಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ ಪೂಜೆ ಸಲ್ಲಿಸಿ ವಿಸರ್ಜಿಸುವುದರೊಂದಿಗೆ ಸಂಭ್ರಮದ ಗಣೇಶೋತ್ಸವಕ್ಕೆ ತೆರೆ ಕಂಡಿತು.
ಮೆರವಣಿಗೆಯುದ್ದಕ್ಕೂ ಬಣ್ಣ ಬಣ್ಣದ ಬಾನಂಗಳದಲ್ಲಿ ಪಟಾಕಿಗಳು ಆಕರ್ಷಕವಾಗಿ ಮೂಡಿಬಂದವು. ಸುನ್ನಿ ಶಾಫಿ ಮಸೀದಿ ಬಳಿ ಬರುತ್ತಿದ್ದಂತೆ ಮುಸ್ಲಿಂ ಬಾಂಧವರು ಪಾನಿಯ ವಿತರಣೆ ಮಾಡಿದರು.ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಎಸ್.ವಿಘ್ನೇಶ್, ಉಪಾಧ್ಯಕ್ಷjeದ ಬಿ.ಕೆ.ಪ್ರಶಾಂತ್, ಸಿ.ಸಿ.ಸುನಿಲ್ ಕುಮಾರ್, ಎಂ. ಗಣೇಶ್, ಪ್ರಧಾನ ಕಾರ್ಯದರ್ಶಿ ಎಚ್. ಎಂ. ನಿಖಿಲ್, ಖಜಾಂಜಿ ಪದ್ಮನಾಭ, ಪದಾಧಿಕಾರಿಗಳಾದ ಎಂ. ಪಾಂಡ್ಯನ್, ಹೆಚ್.ನವೀನ್, ಜಿ.ಹೃತಿಕ್, ಆರ್.ಮಣಿ, ಕೆ.ಎಂ.ಅಜಿತ್, ಆರ್.ಪ್ರಶಾಂತ್, ಎಸ್.ರಾಜೇಶ್, ಬಿ.ಡಿ.ಆಶ್ವಥ್, ಹೆಚ್.ಸಿ.ಯೋಗೇಶ್, ಚೇತನ್, ಆರ್.ಪುನೀತ್, ಗುಣಶೇಖರ್, ತ್ರೀಜಲ್, ಮಹೇಶ್, ದಿನೇಶ್, ಮಿಥುನ್, ಹಿರಿಯರಾದ ಶಾಂತರಾಮ ಕಾಮತ್, ಧನು ಕಾವೇರಪ್ಪ, ಪಿ.ಆರ್.ಸುನಿಲ್ ಕುಮಾರ್, ಪಟ್ಟೆಮನೆ ಉದಯಕುಮಾರ್, ಬಿ.ಎಂ.ಸುರೇಶ್, ಸುರೇಶ್ ಗೋಪಿ, ಎಂ.ಎಸ್.ಸುನಿಲ್, ಮಿಥುನ್, ದಿನುದೇವಯ್ಯ ಸೇರಿದಂತೆ ಮತ್ತಿತರರು ಇದ್ದರು.